ಅನಧಿಕೃತ ಬಡಾವಣೆಗಳ ಸಂಬಂಧ ಸಾರ್ವಜನಿಕರಿಂದ ವ್ಯಾಪಕ ದೂರು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ವಿವರಣೆ
ಮೈಸೂರು

ಅನಧಿಕೃತ ಬಡಾವಣೆಗಳ ಸಂಬಂಧ ಸಾರ್ವಜನಿಕರಿಂದ ವ್ಯಾಪಕ ದೂರು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ವಿವರಣೆ

December 28, 2019

ಮೈಸೂರು,ಡಿ.27(ಎಸ್‍ಬಿಡಿ)- ಅನಧಿ ಕೃತ ಬಡಾವಣೆಗಳ ನಿರ್ಮಾಣದ ಬಗ್ಗೆ ಸಾರ್ವಜನಿಕರಿಂದ ಹೆಚ್ಚು ದೂರುಗಳು ಕೇಳಿ ಬಂದಿವೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ತಿಳಿಸಿದರು.

ಮೈಸೂರು ಜಿಲ್ಲಾ ಪಂಚಾಯ್ತಿ ಸಭಾಂ ಗಣದಲ್ಲಿ ಶುಕ್ರವಾರ ಸಂಜೆವರೆಗೂ ಸಾರ್ವಜನಿಕ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ನಡೆಸಿದ ಬಳಿಕ ಮಾತನಾಡಿದ ಅವರು, ಮೈಸೂರು ತಾಲೂಕಿನಲ್ಲಿ ಅನಧಿಕೃತವಾಗಿ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ ಎಂಬ ದೂರು ಸಾರ್ವಜನಿಕರಿಂದ ಹೆಚ್ಚಾಗಿ ಕೇಳಿ ಬಂದಿದೆ. ಎಲ್ಲೆಂದರಲ್ಲಿ ಲೇಔಟ್‍ಗಳು ತಲೆ ಎತ್ತುತ್ತಿವೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ, ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಈ ಬಗ್ಗೆ ಜಿಲ್ಲಾಧಿ ಕಾರಿಗಳೂ ವರದಿ ನೀಡಲಿದ್ದಾರೆ ಎಂದರು.

ಬೆಳಿಗ್ಗೆಯಿಂದ ಸಂಜೆವರೆಗೆ ಸಾರ್ವಜ ನಿಕರಿಂದ ಒಟ್ಟು 70 ದೂರುಗಳು ಸಲ್ಲಿಕೆ ಯಾದವು. ಇದರಲ್ಲಿ 27 ಪ್ರಕರಣಗಳನ್ನು, ಸಂಬಂಧಿಸಿದ ಅಧಿಕಾರಿಗಳ ಸಮ್ಮುಖ ದಲ್ಲೇ ವಿಚಾರಣೆ ನಡೆಸಲಾಗಿದೆ. ಇನ್ನು ಳಿದ ಪ್ರಕರಣಗಳನ್ನು ಪರಿಶೀಲಿಸಿ, ಅಗತ್ಯ ವಾದ ಮತ್ತಷ್ಟು ಮಾಹಿತಿಯೊಂದಿಗೆ ವಿಲೇ ವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸ ಲಾಗಿದೆ ಎಂದು ತಿಳಿಸಿದ ಅವರು, ಕಾರ್ಪೊ ರೇಷನ್, ಪಂಚಾಯ್ತಿ, ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಾರ್ವಜನಿಕರು ಸಭೆಯ ಮುಂದಿ ಟ್ಟರು. ಸಾರ್ವಜನಿಕ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇ ಶನ ನೀಡಿದ್ದೇನೆ ಎಂದು ತಿಳಿಸಿದರು.

ದೂರುಗಳ ವಿಚಾರಣೆಯಲ್ಲಿ ಪಾಲ್ಗೊ ಳ್ಳುವವರ ಹೊರತಾಗಿಯೂ ಸಾಕಷ್ಟು ಜನ ಸಮಸ್ಯೆ ಎದುರಿಸುತ್ತಿರುತ್ತಾರೆ. ಅಂತಹವರ ಸಮಸ್ಯೆಯನ್ನು ಖುದ್ದು ತಿಳಿಯುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ. ಶಾಲಾ-ಕಾಲೇಜು ಹಾಗೂ ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ, ಪರಿಶೀಲಿಸುವ ಮೂಲಕ ವಾಸ್ತವ ತಿಳಿಯು ತ್ತೇನೆಂದು ಉಪ ಲೋಕಾಯುಕ್ತ ನ್ಯಾಯ ಮೂರ್ತಿ ಬಿ.ಎಸ್.ಪಾಟೀಲ್ ಹೇಳಿದರು.ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ಜಿಲ್ಲಾ ಪಂಚಾಯ್ತಿ ಸಿಇಒ ಕೆ.ಜ್ಯೋತಿ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Translate »