ಕಾಡಾನೆ ದಾಳಿ: ಬಾಳೆ ಬೆಳೆ ನಾಶ
ಚಾಮರಾಜನಗರ

ಕಾಡಾನೆ ದಾಳಿ: ಬಾಳೆ ಬೆಳೆ ನಾಶ

January 17, 2019

ಬೇಗೂರು: ಬಾಳೆ ತೋಟಕ್ಕೆ ಕಾಡಾನೆ ಹಿಂಡು ದಾಳಿ ನಡೆಸಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಗಿಡಗಳನ್ನು ತುಳಿದು ನಾಶಪಡಿ ಸಿರುವ ಘಟನೆ ಸಮೀಪದ ಹೊರೆ ಯಾಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅಂಕೇಶ್ ಎಂಬುವವರಿಗೆ ಸೇರಿದ ಜಮೀನಿಗೆ 8 ಕಾಡಾನೆಗಳ ಹಿಂಡು ದಾಳಿ ನಡೆಸಿ ಬಾಳೆ ಬೆಳೆ ನಾಶಪಡಿಸಿದೆ. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಕಳೆದ 15 ದಿನಗಳ ಹಿಂದೆ ಇದೇ ತೋಟಕ್ಕೆ ಕಾಡಾನೆಗಳ ಹಿಂಡು ದಾಳಿ ನಡೆಸಿ ಸುಮಾರು 500ಕ್ಕೂ ಹೆಚ್ಚು ಬಾಳೆಗಿಡಗಳನ್ನು ನಾಶಪಡಿಸಿದ್ದವು. ಇದ ರಿಂದ ಇವರಿಗೆ ಸುಮಾರು 50 ಸಾವಿ ರಕ್ಕೂ ಹೆಚ್ಚು ನಷ್ಟ ಸಂಭವಿಸಿತ್ತು ಎಂದು ಅಳಲು ತೋಡಿಕೊಂಡಿದ್ದಾರೆ.
ಸಾಲ ಮಾಡಿ ಹಾಕಿದ ಬೆಳೆಗಳು ಕೈ ಸೇರುವ ಮೊದಲೇ ಕಾಡುಪ್ರಾಣಿಗಳ ಪಾಲಾಗುತ್ತಿದೆ. ಇದರಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ ಎಂದು ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಓಂಕಾರ್ ಅರಣ್ಯವಲಯಕ್ಕೆ ದೂರು ನೀಡಲಾಗಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿ ಗಳು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ಈ ವೇಳೆ ರೈತರಾದ ಲೋಕೇಶ್, ಮಹದೇವಸ್ವಾಮಿ, ಗುರುಸ್ವಾಮಿ ಅವರು ಅರಣ್ಯಾಧಿಕಾರಿಗಳೊಂದಿಗೆ ಮಾತ ನಾಡಿ, ಕೂಡಲೇ ಆನೆಗಳನ್ನು ಕಾಡಿಗೆ ಓಡಿಸಬೇಕು ಎಂದು ಒತ್ತಾಯಿಸಿದರು.

Translate »