ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿ
ಕೊಡಗು

ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿ

August 12, 2018

ಮಡಿಕೇರಿ: ತೋಟದ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಸುಂಟಿಕೊಪ್ಪದ ಕೊಡಗರ ಹಳ್ಳಿ ಬಳಿ ನಡೆದಿದೆ.

ಸ್ಥಳೀಯ ನಿವಾಸಿ ರಾಧಾ (55) ಎಂಬಾಕೆ ಎಂದಿ ನಂತೆ ತೋಟದ ಕೆಲಸಕ್ಕೆ ತೆರಳಿದ ಸಂದರ್ಭ ಕಾಫಿ ತೋಟದ ಒಳಗಾಗಿದ್ದ ಕಾಡಾನೆ ಏಕಾಏಕಿ ದಾಳಿ ನಡೆದಿದೆ. ಕಾಡಾನೆ ಧಾಳಿಯಿಂದ ರಾಧಾ ಅವರ ಬಲಗೈ ಮುರಿಯಲ್ಪಟ್ಟಿದ್ದು ಕೂದೆಲೆಳೆಯ ಅಂತರ ಪ್ರಾಣಾ ಪಾಯದಿಂದ ಪಾರಾಗಿದ್ದಾರೆ.

ಗಾಯಾಳುವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಅರಣ್ಯಾಧಿಕಾರಿಗಳು ಆಸ್ಪತ್ರೆಗೆ ತೆರಳಿದ ಗಾಯಾಳುವಿನ ಯೋಗಕ್ಷೇಮ ವಿಚಾರಿಸಿದರು.

Translate »