ಕಾಡು ಹಂದಿ ದಾಳಿ; ರಾಗಿ ಬೆಳೆ ನಾಶ
ಚಾಮರಾಜನಗರ

ಕಾಡು ಹಂದಿ ದಾಳಿ; ರಾಗಿ ಬೆಳೆ ನಾಶ

October 27, 2018

ಚಾಮರಾಜನಗರ:  ತಾಲೂಕಿನ ಅರಕಲವಾಡಿ ಗ್ರಾಮದಲ್ಲಿ ಕಾಡು ಹಂದಿಗಳು ಜಮೀನಿಗೆ ದಾಳಿ ಮಾಡಿ ಸುಮಾರು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ರಾಗಿ ಬೆಳೆ ನಾಶಪಡಿಸಿವೆ.

ಗ್ರಾಮದ ದೊಡ್ಡಮ್ಮ ಬಿನ್ ವೆಂಕಟಯ್ಯ ಎಂಬುವರಿಗೆ ಸೇರಿದ 3 ಎಕರೆ ಜಮೀನಿನಲ್ಲಿ ರಾಗಿ ಬೆಳೆಯಲಾಗಿತ್ತು. ರಾತ್ರಿ ವೇಳೆ ಜಮೀನಿಗೆ ಲಗ್ಗೆ ಇಟ್ಟ ಕಾಡು ಹಂದಿಗಳುರಾಗಿ ಬೆಳೆಯನ್ನು ತಿಂದು, ತುಳಿದು ನಾಶ ಪಡಿಸಿವೆ. ಇದರಿಂದ ಸಾವಿರಾರು ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ನಷ್ಟಕ್ಕೆ ಒಳಗಾಗಿರುವ ದೊಡ್ಡಮ್ಮ ಅವರಿಗೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅರಕಲವಾಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡು ಹಂದಿ ಸೇರಿದಂತೆ ಇನ್ನಿತರ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದೆ. ರೈತ ಕಷ್ಟಪಟ್ಟು ಬೆಳೆದ ಬೆಳೆಯನ್ನು ನಾಶಪಡಿಸುತ್ತಿವೆ. ಇದ ರಿಂದ ರೈತರು ನಷ್ಟಕ್ಕೆ ಈಡಾಗುತ್ತಿದ್ದಾರೆ. ಹೀಗಾಗಿ ಕಾಡು ಪ್ರಾಣಿಗಳು ಜಮೀನಿಗೆ ಲಗ್ಗೆ ಇಡುವುದನ್ನು ತಪ್ಪಿಸಲು ಅರಣ್ಯ ಇಲಾಖೆಯ ವರು ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Translate »