ಮೋದಿ ಅಲೆಯಲ್ಲಿ ನನ್ನ ಗೆಲುವು ನಿಶ್ಚಿತ: ಪ್ರತಾಪ್ ಸಿಂಹ
ಮೈಸೂರು

ಮೋದಿ ಅಲೆಯಲ್ಲಿ ನನ್ನ ಗೆಲುವು ನಿಶ್ಚಿತ: ಪ್ರತಾಪ್ ಸಿಂಹ

April 19, 2019

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅಲೆ ಇರುವುದರಿಂದ ನನ್ನ ಗೆಲುವು ನಿಶ್ಚಿತ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಾರಿ ಮತ ದಾನದ ಪ್ರಮಾಣ ಹೆಚ್ಚಾಗಿರುವುದರಿಂದ ಯುವ ಕರೂ ಸೇರಿದಂತೆ ಕ್ಷೇತ್ರದ ಜನರು ನನ್ನನ್ನು ಬೆಂಬ ಲಿಸಿದ್ದಾರೆ. ಹಳ್ಳಿಯಿಂದ ದಿಲ್ಲಿವರೆಗೂ ಮೋದಿ ಅವರ ಅಲೆ ಇರುವುದರಿಂದ ನಾನು ಗೆಲುವು ಸಾಧಿಸುವುದು ನಿಶ್ಚಿತ ಎಂದು ಅವರು ತಿಳಿಸಿದರು.

ಕ್ಷೇತ್ರದಾದ್ಯಂತ ಬೆಳಿಗ್ಗೆಯಿಂದ ಸಂಜೆವರೆಗೂ ಸ್ವಯಂಪ್ರೇರಿತವಾಗಿ ಮತದಾರ ತನ್ನ ಹಕ್ಕು ಚಲಾಯಿಸಿರುವುದನ್ನು ಗಮನಿಸಿದರೆ, ಈ ಬಾರಿ ಬಿಜೆಪಿಗೆ ವರದಾನವಾಗಲಿದೆ. ಯಾವುದೇ ಸಂಶಯವಿಲ್ಲ. ಭಾರೀ ಮತಗಳ ಅಂತರದಿಂದ ನಾನು ಜಯ ಗಳಿಸುತ್ತೇನೆ ಎಂದು ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.

Translate »