ಬೆಂಗಳೂರು: ಚಳಿಗಾಲದ ವಿಧಾನಮಂಡಲದ ಅಧಿವೇಶನ ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 10ರಿಂದ 21ರವರೆಗೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯ ಸಚಿವ ಸಂಪುಟ ನೀಡಿದ ಅಧಿಕಾರವನ್ನು ಬಳಕೆ ಮಾಡಿಕೊಂಡು ಮುಖ್ಯಮಂತ್ರಿ ಯವರು ಈ ದಿನಾಂಕದಲ್ಲಿ ಅಧಿವೇಶನ ಕರೆಯಲು ಅನುಮತಿ ನೀಡುವಂತೆ ರಾಜ್ಯಪಾಲರನ್ನು ಕೋರಿದ್ದಾರೆ.