37 ಶಾಸಕರ ಇಟ್ಟುಕೊಂಡು ಸಾಲ ಮನ್ನಾ ಸಾಧ್ಯವೇ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರ ಬೇಸರದ ನುಡಿ
ಮೈಸೂರು

37 ಶಾಸಕರ ಇಟ್ಟುಕೊಂಡು ಸಾಲ ಮನ್ನಾ ಸಾಧ್ಯವೇ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರ ಬೇಸರದ ನುಡಿ

May 29, 2018

ಬೆಂಗಳೂರು: ನಾವು 37 ಶಾಸಕರನ್ನು ಇಟ್ಟುಕೊಂಡು ಸಾಲ ಮನ್ನಾ ಮಾಡುವುದಾದರೂ ಹೇಗೆ? ಎಂದು ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಬೇಸರದ ಮಾತುಗಳನ್ನು ಆಡಿದ್ದಾರೆ.

ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆಂದು ಕುಮಾರಸ್ವಾಮಿ ಹೇಳಿಕೆ ನೀಡಿದ ವಿಚಾರವಾಗಿ ಮಾತನಾಡಿದ ದೇವೇಗೌಡರು ಮುಖ್ಯಮಂತ್ರಿ ಕುಮಾರಸ್ವಾಮಿ ಸನ್ನಿವೇಶದ ಶಿಶು, ಹೆಚ್ಡಿಕೆ ಹೇಳುತ್ತಿರುವುದು ನಿಜ.

ನನಗೂ ಈ ವಿಚಾರವಾಗಿ ನೋವಿದೆ. ರಾಜ್ಯದ ಆರೂವರೆ ಕೋಟಿ ಜನ ಹೆಚ್ಡಿಕೆಗೆ ಬೆಂಬಲ ನೀಡಿಲ್ಲ. ಕೇವಲ 37 ಶಾಸಕರನ್ನು ಇಟ್ಟುಕೊಂಡು ಹೇಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಪದವಿಯನ್ನು ಕಾಂಗ್ರೆಸ್ ಪಡೆದುಕೊಳ್ಳಲಿ ಎಂದು ನಾನು ಹೇಳಿದ್ದೆ. ಆದರೆ ಕಾಂಗ್ರೆಸ್‍ನವರು ಕುಮಾರಸ್ವಾಮಿಯವರೇ ಮುಖ್ಯಮಂತ್ರಿ ಪದವಿಯನ್ನು ಪಡೆಯಬೇಕು ಎಂದು ಹೇಳಿದ್ದಾರೆ. ಹಣಕಾಸು ಇಲಾಖೆಯನ್ನು ಕಾಂಗ್ರೆಸ್ ತನಗೆ ಬೇಕೆಂದು ಕೇಳುತ್ತಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

Translate »