ಗುಣಾತ್ಮಕ ಶಿಕ್ಷಣದೊಂದಿಗೆ  ಭವಿಷ್ಯ ರೂಪಿಸಿಕೊಳ್ಳಿ; ಸಚಿವ ಸಿ.ಪುಟ್ಟರಂಗ ಶೆಟ್ಟಿ
ಚಾಮರಾಜನಗರ

ಗುಣಾತ್ಮಕ ಶಿಕ್ಷಣದೊಂದಿಗೆ ಭವಿಷ್ಯ ರೂಪಿಸಿಕೊಳ್ಳಿ; ಸಚಿವ ಸಿ.ಪುಟ್ಟರಂಗ ಶೆಟ್ಟಿ

February 6, 2019

ಚಾಮರಾಜನಗರ: ಗುಣಾತ್ಮಕ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗ ಶೆಟ್ಟಿ ಕಿವಿಮಾತು ಹೇಳಿದರು.

ನಗರದ ಉಪ್ಪಾರ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುತ್ತುಗೋಡೆ ನಿರ್ಮಾಣದ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ವಿದ್ಯಾರ್ಥಿಗಳಿಗೆ ಬೈಸಿಕಲ್‍ಗಳನ್ನು ವಿತರಿಸಿ ಅವರು ಮಾತನಾಡಿದರು.

ಶಿಕ್ಷಣ ಬಹಳ ಮಹತ್ವವಾದದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಶಿಕ್ಷಣ ಪಡೆಯ ಬೇಕು. ಯಾರೂ ಸಹ ಶಿಕ್ಷಣದಿಂದ ವಂಚಿತರಾಗಬಾರದು. ಮಕ್ಕಳಿಗಾಗಿ ಆಸ್ತಿ ಮಾಡುವುದನ್ನು ಬಿಟ್ಟು, ಮಕ್ಕಳನ್ನೇ ಆಸ್ತಿಯಾಗಿ ಮಾಡಿ ಎಂದು ಪೋಷಕರಿಗೆ ಸಲಹೆ ನೀಡಿದರಲ್ಲದೆ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಹಲವು ಸೌಲಭ್ಯ ನೀಡುತ್ತಿದೆ. ಇದನ್ನು ಸದು ಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಪಂ ಅಧ್ಯಕ್ಷ ಸಿ.ಎ.ಮಹದೇವಶೆಟ್ಟಿ ನಗರಸಭಾ ಸದಸ್ಯರಾದ ಬಸವಣ್ಣ ಆರ್.ಎಂ.ರಾಜಪ್ಪ ಮಾಜಿ ಸದಸ್ಯ ಬಂಗಾರು, ಮುಖಂಡರಾದ ಕೆ.ಟಿ.ನಾಗಶೆಟ್ಟಿ ವೆಂಕಟರಾಮ್, ಚಾ.ಹ ಶಿವರಾಜು, ಪರಮೇಶ್, ಮಹದೇವಸ್ವಾಮಿ ಮುಖ್ಯಶಿಕ್ಷಕ ಮಹದೇವಸ್ವಾಮಿ ಇನ್ನಿತರರಿದ್ದರು.

Translate »