ಅಂಗನವಾಡಿ ಕಾರ್ಯಕರ್ತೆಯರೊಂದಿಗೆ  ಯಡಿಯೂರಪ್ಪ ವಿಡಿಯೋ ಸಂವಾದ ಸೋಂಕಿಗೆ ಬಲಿಯಾದ ಕಾರ್ಯಕರ್ತೆಯರಿಗೆ 30 ಲಕ್ಷ ಪರಿಹಾರ
News

ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಯಡಿಯೂರಪ್ಪ ವಿಡಿಯೋ ಸಂವಾದ ಸೋಂಕಿಗೆ ಬಲಿಯಾದ ಕಾರ್ಯಕರ್ತೆಯರಿಗೆ 30 ಲಕ್ಷ ಪರಿಹಾರ

June 10, 2021

ಬೆಂಗಳೂರು,ಜೂ.9(ಕೆಎಂಶಿ)-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧ ವಾರ ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ವಿಡಿಯೋ ಸಂವಾದ ನಡೆಸಿ, ಅವರ ಕಾರ್ಯನಿರ್ವಹಣೆ, ಸಮಸ್ಯೆಗಳು, ಸವಾಲುಗಳು ಮತ್ತು ಇತರ ವಿಷಯಗಳ ಕುರಿತು ಚರ್ಚಿಸಿದರು. ಕೋವಿಡ್-19 ಸೋಂಕಿನ ನಿಯಂ ತ್ರಣದಲ್ಲಿ ತಳಹಂತದಲ್ಲಿ ಅಂಗನವಾಡಿ ಕಾರ್ಯ ಕರ್ತೆಯರೂ, ಗಮನಾರ್ಹ ಸೇವೆ ಸಲ್ಲಿಸುತ್ತಿದ್ದಾರೆ. ಆರು ವರ್ಷದೊಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರ ಆರೋಗ್ಯ ರಕ್ಷಣೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತೀ ಮುಖ್ಯವಾದುದು ಎಂದು ಮುಖ್ಯಮಂತ್ರಿ ಗಳು ಅಭಿಪ್ರಾಯಪಟ್ಟರು. ಮೂರನೇ ಅಲೆಯಲ್ಲಿ ಕೋವಿಡ್-19 ಸೋಂಕು ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣೆಯಲ್ಲಿ ನಿಮ್ಮ ಪಾತ್ರ ಅತೀ ಮುಖ್ಯವಾದುದು.
ಅಪೌಷ್ಟಿಕ ಮಕ್ಕಳು, ಅನಾರೋಗ್ಯ ಪೀಡಿತ ಮಕ್ಕಳನ್ನು ಗುರುತಿಸಿ, ಅವರ ಆರೊಗ್ಯ ರಕ್ಷಣೆಗೆ ಆದ್ಯತೆ ನೀಡಬೇಕಾಗಿದೆ. ಈ ದಿಸೆಯಲ್ಲಿ ಆರೋಗ್ಯ ಇಲಾಖೆಯೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಸೋಂಕು ನಿಯಂತ್ರಣಕ್ಕೆ ಆಸ್ಥೆಯಿಂದ ಶ್ರಮಿಸಬೇಕೆಂದು ಸಿಎಂ ಸಲಹೆ ನೀಡಿದರು. ಕೋವಿಡ್-19ರ ಸಂದರ್ಭದಲ್ಲಿ ಮನೆ-ಮನೆ ಭೇಟಿ ನೀಡಿ ಅರಿವು ಮೂಡಿಸುವುದು, ಗ್ರಾಮ ಪಂಚಾಯಿತಿ ಟಾಸ್ಕ್ ಫೋರ್ಸ್‍ನಲ್ಲಿ ಕಾರ್ಯ ನಿರ್ವಹಣೆ ಜೊತೆಗೆ ಅಂಗನವಾಡಿಗಳು ಮುಚ್ಚಿದ ಕಾರಣ ಫಲಾನುಭವಿ ಮಕ್ಕಳು, ಬಾಣಂತಿಯರು, ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ಮನೆಗೆ ತಲುಪಿಸುವ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ರಾಜ್ಯದಲ್ಲಿ ಶೇ. 85.91ರಷ್ಟು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಲಸಿಕೆ ಪಡೆದಿರುವ ಕುರಿತು ಸಂತಸ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಅಂಗನವಾಡಿ ಕಾರ್ಯಕರ್ತೆಯರನ್ನು ಸಹ ಕೊರೊನಾ ವಾರಿಯರ್ಸ್ ಎಂದು ಘೋಷಿಸಲಾಗಿದ್ದು, ಕೋವಿಡ್‍ನಿಂದ ಮೃತಪಟ್ಟ ಕಾರ್ಯಕರ್ತೆಯರಿಗೆ 30 ಲಕ್ಷ ರೂ. ಪರಿಹಾರ ನೀಡ ಲಾಗುತ್ತಿದೆ. ಮೊದಲ ಅಲೆಯ ಸಂದರ್ಭದಲ್ಲಿ ಒಟ್ಟು 20 ಜನ ಕಾರ್ಯಕರ್ತೆಯರು, ಸಹಾಯಕಿಯರು ಮೃತಪಟ್ಟಿದ್ದು, ಅವರಿಗೆ ತಲಾ 30 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ ಎಂದರು. ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ವಿವಿಧ ವರ್ಗಗಳಿಗೆ ಪರಿಹಾರದ ಪ್ಯಾಕೇಜನ್ನು ಘೋಷಿಸಿದ್ದು, ಅಂಗನವಾಡಿ ಕಾರ್ಯ ಕರ್ತೆಯರಿಗೂ ತಲಾ 2,000 ರೂ. ಪರಿಹಾರ ಘೋಷಿಸಲಾಗಿದೆ ಎಂದರು.

 

Translate »