ವೈದ್ಯರು, ಆರೋಗ್ಯ ಸಿಬ್ಬಂದಿ, ಜಿಲ್ಲಾಡಳಿತದ ಪರಿಶ್ರಮದಿಂದ ಮೈಸೂರಲ್ಲಿ ಕೊರೊನಾ ಸೋಂಕು ನಿಯಂತ್ರಣ
ಮೈಸೂರು

ವೈದ್ಯರು, ಆರೋಗ್ಯ ಸಿಬ್ಬಂದಿ, ಜಿಲ್ಲಾಡಳಿತದ ಪರಿಶ್ರಮದಿಂದ ಮೈಸೂರಲ್ಲಿ ಕೊರೊನಾ ಸೋಂಕು ನಿಯಂತ್ರಣ

May 11, 2020

ಮೈಸೂರು,ಮೇ 10(ಎಂಟಿವೈ)- ವೈದ್ಯರು, ಆರೋಗ್ಯ ಸಿಬ್ಬಂದಿ ಹಾಗೂ ಜಿಲ್ಲಾಡಳಿತದ ಸತತ ಪರಿಶ್ರಮದಿಂದ ಮೈಸೂರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ವೈರಾಣು ಹರಡುವು ದನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳು ವುದರೊಂದಿಗೆ ವೈಯಕ್ತಿಕ ಸುರಕ್ಷತೆಗೆ ಆದ್ಯತೆ ನೀಡು ವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ಪತ್ರ ಮುಖೇನ ಮನವಿ ಮಾಡಿದ್ದಾರೆ.

ಮೈಸೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿ ಮುಖವಾಗುವುದರೊಂದಿಗೆ ಕಳೆದ 9 ದಿನದಿಂದ ಹೊಸ ಸೋಂಕಿತರ ಪತ್ತೆಯಾಗದೇ ಇರುವುದಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿಗಳ ಮೂಲಕ ಪತ್ರ ಬರೆದು ಜಿಲ್ಲೆಯ ಜನರು ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಪಂಚಸೂತ್ರ ಅನುಸರಿಸುವಂತೆ ಕೋರಿದ್ದಾರೆ.

ಪಂಚ ಸೂತ್ರಗಳು: ಜಿಲ್ಲೆಯ ಜನತೆ ಜಿಲ್ಲಾಡಳಿತದ ಸೂಚನೆಯೊಂದಿಗೆ ಕೆಲವು ನಿಯಮ ಪಾಲಿಸಬೇಕು. ವಿದೇಶ -ಹೊರ ರಾಜ್ಯಗಳಿಂದ ಬಂದವರು ಕಡ್ಡಾಯವಾಗಿ 14 ದಿನಗಳು ಕ್ವಾರಂಟೈನ್‍ಗೆ ಒಳಪಡಿಸ ಬೇಕು. ಮಹಿಳೆಯರು ಮತ್ತು ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ, ಅವರ ಸುರಕ್ಷತೆ ಬಗ್ಗೆ ಜಾಗ್ರತೆ ವಹಿಸಬೇಕು. ವಯೋವೃದ್ಧರನ್ನು ನೋಡಿಕೊಳ್ಳಲು ಪ್ರತ್ಯೇಕ ತಂಡ ರಚಿಸಿ, ವಿಶೇಷ ನಿಗಾವಹಿಸಬೇಕು. ಸಾರ್ವಜನಿಕರು ಸಾಮಾ ಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಖಾತರಿಸಿಕೊಳ್ಳ ಬೇಕು. ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಈಗಾ ಗಲೇ ಕೆಲಸ ಆರಂಭವಾಗಿರುವ ಕಾರ್ಖಾನೆಗಳಿಗೆ ಅಧಿಕಾರಿ ಗಳು ಆಗಾಗ ದಿಢೀರ್ ಭೇಟಿ ನೀಡಿ ಪರಿಶೀಲಿಸಬೇಕು. ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಆಗುತ್ತಿದೆಯೇ ಎಂಬು ದನ್ನು ಗಮನಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಸೋಂಕಿತರ ಸಂಖ್ಯೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ದಲ್ಲಿದ್ದ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತ 90 ಪಾಸಿಟಿವ್ ಪ್ರಕರಣಗಳು ದಾಖಲಾಗಿತ್ತು. ಪ್ರಸ್ತುತ ಸೋಂಕಿತರ ಸಂಖ್ಯೆ ಕೇವಲ 4ಕ್ಕೆ ಕುಸಿದಿದೆ. ಇನ್ನು ವಾರದೊಳಗೆ ಶೂನ್ಯಕ್ಕೆ ಇಳಿಯುತ್ತದೆ. ಈ ಸಾಧನೆ ಹಿಂದೆ ಜಿಲ್ಲಾಧಿಕಾರಿ, ಜಿಲ್ಲಾಡಳಿತ, ಪೆÇಲೀಸ್ ಇಲಾಖೆ, ಜಿಲ್ಲಾ ಆರೋಗ್ಯಾಧಿಕಾರಿಗಳು, ನರ್ಸ್‍ಗಳು ಆಶಾ ಕಾರ್ಯ ಕರ್ತೆಯರು ಇದ್ದಾರೆ. ಇವರೊಂದಿಗೆ ಮಾಧ್ಯಮದವರು ಸಹ ಕೊರೋನಾ ವಾರಿಯರ್ಸ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಕೊರೊನಾ ಕರ್ತವ್ಯದಲ್ಲಿ ನಿರತರಾಗಿರುವ ಎಲ್ಲಾ ಇಲಾಖೆ ಅಧಿಕಾರಿಗಳು ದಿನದ 24 ಗಂಟೆಯೂ ಸಮರೋಪಾದಿಯಲ್ಲಿ ಕೆಲಸ ಮಾಡಿದ ಫಲವಾಗಿ ಕೊರೋನಾ ಪ್ರಕರಣ ನಿಯಂತ್ರಣಕ್ಕೆ ಬಂದಿದೆ. ಇದಕ್ಕೆ ಕಾರಣರಾದ ಎಲ್ಲರನ್ನು ಅಭಿನಂದಿಸುತ್ತೇನೆ.

Translate »