ಡಿಸೆಂಬರ್ ಒಳಗೆ 18 ವರ್ಷ  ಮೇಲ್ಪಟ್ಟ ಎಲ್ಲರಿಗೂ ಲಸಿಕೆ
News

ಡಿಸೆಂಬರ್ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ

June 17, 2021

ಬೆಂಗಳೂರು,ಜೂ.16(ಕೆಎಂಶಿ)-ಮಹಾಮಾರಿ ಕೋವಿಡ್ ನಿಂದ ಜೀವ ಕಾಪಾ ಡುವ ಲಸಿಕೆಯ ಬಗ್ಗೆ ನಡೆಯುತ್ತಿರುವ ರಾಜ ಕೀಯ ಮೇಲಾಟ ಅತ್ಯಂತ ದುರದೃಷ್ಟಕರ. ಆದರೆ ಡಿಸೆಂಬರ್ ಒಳಗಾಗಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರ್ಕಾರ ಲಸಿಕೆ ನೀಡಿಯೇ ನೀಡುತ್ತದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ನಗರದಲ್ಲಿಂದು ವಕೀಲರಿಗೆ ಆಯೋಜಿಸಿದ್ದ ವಿಶೇಷ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿ ದರು. ಕೋವಿಡ್ ಮಾರಿಯನ್ನು ನಮ್ಮ ಹತ್ತಿರಕ್ಕೆ ಬರದಂತೆ ತಡೆಯಲು ಇರುವ ಏಕೈಕ ಪರಿಹಾರ ಲಸಿಕೆ ಮಾತ್ರ. ಆದರೆ, ಇದರ ಬಗ್ಗೆ ನಡೆಯುತ್ತಿರುವ ರಾಜಕೀಯ ಅಷ್ಟಿಷ್ಟಲ್ಲ. ಜಾಗತಿಕವಾಗಿ ನಡೆದ ಷಡ್ಯಂತ್ರ ಗಳನ್ನು ಪ್ರಧಾನಿ ಮೋದಿ ಅವರು ಪರಿಣಾಮ ಕಾರಿಯಾಗಿ ಎದುರಿಸಿದರು. ಅದೇ ರೀತಿ ನಮ್ಮ ರಾಜ್ಯದಲ್ಲಿ ಸೃಷ್ಟಿಯಾಗಿರುವ ರಾಜ ಕೀಯ ತಂತ್ರಗಳಿಗೆ ರಾಜ್ಯ ಸರ್ಕಾರ ತಿರುಗೇಟು ಕೊಟ್ಟಿದೆ ಎಂದರು. ಜಗತ್ತಿನ ಇತರೆ ದೇಶ ಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಲಸಿಕೆಯ ಸಂಶೋಧನೆ, ತಯಾರಿಕೆ ಮತ್ತು ಲಸಿಕೀಕರಣ ಅತ್ಯಂತ ವೇಗವಾಗಿ ಆಗಿದೆ. ಇದನ್ನು ಪ್ರತಿಯೊಬ್ಬರೂ ಗುರುತಿಸಬೇಕು ಎಂದರು. ಈಗ ಪ್ರತಿಯೊ ಬ್ಬರೂ ಲಸಿಕೆಯನ್ನು ತಪ್ಪದೇ ಪಡೆಯಬೇಕು. ಜತೆಗೆ, ಕುಟುಂಬ ದವರಿಗೂ ಕೊಡಿಸಬೇಕು ಹಾಗೂ ನಮ್ಮ ಸುತ್ತಮುತ್ತಲಿನ ಜನರು ಪಡೆಯುವಂತೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

 

Translate »