ಮೈಸೂರು: ವಿಷ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ನಂಜನಗೂಡು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ನಂಜನಗೂಡು ತಾಲೂಕು, ಮರಳೂರು ಗ್ರಾಮದ ನಿವಾಸಿ ಕೆಂಪೇಗೌಡರ ಪತ್ನಿ ಶ್ರೀಮತಿ ಶಿವಮ್ಮ ಸಾವನ್ನಪ್ಪಿದವರು. ಭಾನುವಾರ ರಾತ್ರಿ ವಿಷ ಸೇವಿಸಿ ಅಸ್ವಸ್ಥರಾಗಿದ್ಧ ಅವರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ ಎಂದು ಪ್ರಕರಣ ದಾಖ ಲಿಸಿಕೊಂಡಿರುವ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ. ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಶವಾಗಾರದಲ್ಲಿ ಮರಣೋ ತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.