ಮಹಿಳೆಯರೂ ಮಸೀದಿಗೆ ಬಂದು ಪ್ರಾರ್ಥನೆ ಸಲ್ಲಿಸಬಹುದು: ಸುಪ್ರೀಂಕೋರ್ಟ್‍ನಲ್ಲಿ ಮುಸ್ಲಿಂ ಕಾನೂನು ಮಂಡಳಿ ಪ್ರಮಾಣಪತ್ರ ಸಲ್ಲಿಕೆ
ಮೈಸೂರು

ಮಹಿಳೆಯರೂ ಮಸೀದಿಗೆ ಬಂದು ಪ್ರಾರ್ಥನೆ ಸಲ್ಲಿಸಬಹುದು: ಸುಪ್ರೀಂಕೋರ್ಟ್‍ನಲ್ಲಿ ಮುಸ್ಲಿಂ ಕಾನೂನು ಮಂಡಳಿ ಪ್ರಮಾಣಪತ್ರ ಸಲ್ಲಿಕೆ

January 30, 2020

ನವದೆಹಲಿ: ಮುಸ್ಲಿಂ ಮಹಿಳೆಯರು ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಬಹುದು. ಮತ್ತು ಇದಕ್ಕೆ ವಿರುದ್ಧವಾಗಿರುವ ಫತ್ವಾಸ್‍ಅನ್ನು ನಿರ್ಲಕ್ಷಿಸಿ ಎಂದು ಅಖಿಲ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‍ಬಿ) ಬುಧವಾರ ಸುಪ್ರೀಂಕೋರ್ಟ್‍ಗೆ ಹೇಳಿದೆ. ಈ ವಿಚಾರವಾಗಿ ಸುಪ್ರೀಂಕೋರ್ಟ್‍ನಲ್ಲಿ ಅಫಿಡವಿಟ್ ಸಲ್ಲಿಸಿರುವ ಮುಸ್ಲಿಂ ಕಾನೂನು ಮಂಡಳಿ, ಮುಸ್ಲಿಂ ಮಹಿಳೆಯರು ಮಸೀದಿ ಪ್ರವೇಶಕ್ಕೆ ಅವಕಾಶ ಮುಕ್ತವಾಗಿದೆ. ಅವರು ಹಾಗೆ ಮಾಡುವುದು ಕಡ್ಡಾಯವೇನಲ್ಲ. ಮಹಿಳೆಯರು ಮಸೀದಿ ಬದಲಿಗೆ ಮನೆಯಲ್ಲೂ ಪ್ರಾರ್ಥನೆ ಸಲ್ಲಿಸಲು ಆಯ್ಕೆ ಕೂಡ ಇದೆ. ಮಹಿಳೆಯರಿಗೂ ಮಸೀದಿ ಪ್ರವೇಶಕ್ಕೆ ಅವಕಾಶ ನೀಡುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡುವಂತೆ ಕೋರಿ ಮುಸ್ಲಿಂ ಮಹಿಳೆಯರು ಸಲ್ಲಿಸಿದ್ದ ಅರ್ಜಿಗೆ ಮುಸ್ಲಿಂ ಕಾನೂನು ಮಂಡಳಿ ಹೀಗೆ ಪ್ರತಿಕ್ರಿಯಿಸಿದೆ ಎಂದು ಮುಸ್ಲಿಂ ಕಾನೂನು ಮಂಡಳಿ ತನ್ನ ಅಫಿಡವಿಟ್‍ನಲ್ಲಿ ತಿಳಿಸಿದೆ.

Translate »