ಅರೆನಗ್ನ ಸ್ಥಿತಿಯಲ್ಲಿ ಓಡಾಡುತ್ತಿದ್ದ ಮಹಿಳೆಯರು: ಆಕ್ರೋಶ
ಮಂಡ್ಯ

ಅರೆನಗ್ನ ಸ್ಥಿತಿಯಲ್ಲಿ ಓಡಾಡುತ್ತಿದ್ದ ಮಹಿಳೆಯರು: ಆಕ್ರೋಶ

June 4, 2018

ಮಂಡ್ಯ: ಬಸ್ ನಿಲ್ದಾಣದಲ್ಲಿ ಅರೆನಗ್ನ ಸ್ಥಿತಿಯಲ್ಲಿ ಓಡಾಡುತ್ತಿದ್ದ ಮಹಿಳೆಯರು ಮತ್ತು ಯುವತಿಯರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿ ದ್ದಲ್ಲದೇ ಪೊಲೀಸರಿಗೆ ಒಪ್ಪಿಸಿದ ಘಟನೆ ಮದ್ದೂರಿನ ಕೊಪ್ಪ ಸರ್ಕಲ್ ಬಸ್ ನಿಲ್ದಾಣದಲ್ಲಿಂದು ನಡೆದಿದೆ.

ಮದ್ದೂರಿನಲ್ಲಿ ಮಹಿಳೆಯರು ಅರೆ ನಗ್ನವಾಗಿ ಓಡಾಡುತ್ತಿದ್ದರು. ಇದನ್ನು ನೋಡಿದ ಸಾರ್ವಜನಿಕರು ಮಹಿಳೆಯರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸಭ್ಯತೆಯಿಂದ ಓಡಾಡುವಂತೆಯೂ ಸೂಚಿಸಿದ್ದಾರೆ. ಇದಕ್ಕೆ ಕಿವಿಗೊಡದ ಮಹಿಳೆ ಯರ ವರ್ತನೆಯ ಬಗ್ಗೆ ಪೊಲೀಸರಿಗೂ ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮದ್ದೂರು ಪೊಲೀಸರು, ಮಹಿಳೆಯರಿಗೆ ಬಟ್ಟೆ ಹಾಕಿಕೊಳ್ಳುವಂತೆ ಬುದ್ಧಿ ಹೇಳಿದ್ದಾರೆ. ಅಲ್ಲದೇ ಸಭ್ಯವಾಗಿ ವರ್ತಿಸುವಂತೆ ತಿಳಿ ಹೇಳಿ ಠಾಣೆಗೆ ಕರೆದೊಯ್ದಿದ್ದಾರೆ. ಇವರು ಯಾರು, ಎಲ್ಲಿಂದ ಬಂದಿದ್ದಾರೆ ಎಂಬ ಬಗ್ಗೆ ತಿಳಿದು ಬಂದಿಲ್ಲ. ಪೊಲೀಸರು ಇವರನ್ನು ವಶಕ್ಕೆ ತೆಗೆದು ಕೊಂಡು ಪರಿಶೀಲಿಸುತ್ತಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Translate »