ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ಮೈಸೂರು

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

January 4, 2020

ಮೈಸೂರು, ಜ. 3(ಆರ್‍ಕೆ)- ಅಡುಗೆ ಅನಿಲ, ಪೆಟ್ರೋಲ್, ಈರುಳ್ಳಿ-ಬೆಳ್ಳುಳ್ಳಿ ಸೇರಿ ದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನ ಗಾಂಧಿ ಸ್ಕ್ವೇರ್‍ನಲ್ಲಿ ಇಂದು ಪ್ರತಿಭಟನೆ ನಡೆಸಿದರು.

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಖಾಲಿ ಸಿಲಿಂಡರ್ ಇರಿಸಿಕೊಂಡು ಸೌದೆ ಒಲೆ ಯಲ್ಲಿ ಅಡುಗೆ ಮಾಡುವ ಅಣಕು ಪ್ರದ ರ್ಶನ ನಡೆಸಿದ ಮಹಿಳೆಯರು, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಾರಣ ಎಂದು ಆರೋಪಿಸಿದರು.

ಅಡುಗೆ ಅನಿಲ, ಈರುಳ್ಳಿ-ಬೆಳ್ಳುಳ್ಳಿ, ಔಷಧಿ, ಅಡುಗೆ ಎಣ್ಣೆ, ಪೆಟ್ರೋಲ್, ಡೀಸೆಲ್, ರೈಲು ಪ್ರಯಾಣ ದರ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕಿದೆ. ಇದರಿಂದ ಬಡವರು, ರೈತರು, ಮಹಿಳೆಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಧರಣಿ ನಿರತರು ಆರೋಪಿಸಿದರು.

ಹೊಸ ವರ್ಷದಲ್ಲಿ ಸರ್ಕಾರ ಜನರಿಗೆ ಬೆಲೆ ಏರಿಕೆ ಉಡುಗೊರೆ ನೀಡಿದೆ ಎಂದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಳ ವಿರುದ್ಧ ಘೋಷಣೆಗಳನ್ನು ಕೂಗಿ ಅಗತ್ಯ ವಸ್ತುಗಳ ಬೆಲೆ ಇಳಿಸದಿದ್ದರೆ ಕಾಂಗ್ರೆಸ್ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮಾಜಿ ಮೇಯರ್‍ಗಳಾದ ಮೋದಾ ಮಣಿ, ಪುಷ್ಪಲತಾ ಚಿಕ್ಕಣ್ಣ ಸೇರಿದಂತೆ ಹಲವು ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »