ಯಾವುದೇ ಪ್ರಭಾವ, ಒತ್ತಡಕ್ಕೆ ಒಳಗಾಗದೇ ಕೆಲಸ ಮಾಡಿ
ಮೈಸೂರು

ಯಾವುದೇ ಪ್ರಭಾವ, ಒತ್ತಡಕ್ಕೆ ಒಳಗಾಗದೇ ಕೆಲಸ ಮಾಡಿ

June 23, 2018

ಬೆಂಗಳೂರು: ಮೈತ್ರಿ ಸರ್ಕಾರ ದಲ್ಲಿ ಬರುವ ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಇಂದಿಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಹಿರಿಯ ಪೊಲೀಸ್ ಅಧಿಕಾರಿ ಗಳ ಸಭೆ ನಡೆಸಿದರು. ಕಾನೂನು ಸುವ್ಯವಸ್ಥೆಯನ್ನು ಸಮರ್ಥವಾಗಿ ನಿಭಾಯಿಸಿ ಶಾಂತಿ-ಸೌಹಾರ್ದತೆ ಕಾಪಾಡಿ ಜನಸ್ನೇಹಿಯಾಗಿರಬೇಕು. ಯಾವುದೇ ಪ್ರಭಾವ, ಒತ್ತಡಕ್ಕೆ ಒಳಗಾಗದೆ ದಕ್ಷ ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಸಮಾಜದಲ್ಲಿ ಶಾಂತಿ-ಸೌಹಾರ್ದತೆಯನ್ನು ಕಾಪಾಡಬೇಕು. ರೌಡಿ ಚಟುವಟಿಕೆಗಳನ್ನು ನಿರ್ದಾಕ್ಷಿಣ್ಯ ವಾಗಿ ನಿಯಂತ್ರಿಸಿ, ಅಪರಾಧಿಗಳು ಹಾಗೂ ಭೂಗತ ಚಟುವಟಿಕೆಗಳನ್ನು ಮಟ್ಟ ಹಾಕಿ, ನಕ್ಸಲ್ ಚಟುವಟಿಕೆ ಗಳನ್ನು ತಲೆ ಎತ್ತದಂತೆ ಮಾಡಿ. ಕೋಮು ಸಂಘರ್ಷ ನಡೆಯದಂತೆ ನೋಡಿಕೊಂಡು ಎಲ್ಲ ಮಾಫಿಯಾಗಳನ್ನೂ ಮಟ್ಟ ಹಾಕಿ ಸಮಾಜ

ಶಾಂತಿಯುತವಾಗಿ ಇರುವಂತೆ ಮಾಡಬೇಕಾದ ಜವಾಬ್ದಾರಿ ತಮ್ಮ ಮೇಲಿದೆ. ತಾವು ಅಹರ್ನಿಶಿಯಾಗಿ ಕೆಲಸ ಮಾಡಬೇಕು. ಈ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರನ್ನು ತರಬೇಕು ಎಂದು ಹೇಳಿದರು. ಸೈದ್ಧಾಂತಿಕ ಹಿನ್ನೆಲೆಯಲ್ಲಿ ನಡೆಯುತ್ತಿರುವ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿರುವುದು ಸಮಾಜಕ್ಕೆ ಒಳ್ಳೆಯ ಬೆಳವಣಿಗೆಯಲ್ಲ. ನಿರ್ದಾಕ್ಷಿಣ್ಯವಾಗಿ ಇವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.

ಗಂಗಾಧರ್ ಚಡಚಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿರುವ ಎನ್‍ಕೌಂಟರ್ ನಲ್ಲಿ ಪೆÇಲೀಸ್ ಅಧಿಕಾರಿಗಳು ಭಾಗಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪೆÇಲೀಸರು ಸಾರ್ವಜನಿಕರಿಗೆ ನಂಬಿಕೆ ಬರುವ ರೀತಿಯಲ್ಲಿ ಕೆಲಸ ಮಾಡಬೇಕು. ಅಪರಾಧ ಜಗತ್ತಿನ ಜತೆ ಯಾರೇ ನಂಟು ಹೊಂದಿದ್ದರೂ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಇಲಾಖೆಯಲ್ಲಿ ಖಾಲಿ ಇರುವ 14 ಸಾವಿರ ಪೆÇಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಅಪರಾಧಗಳ ಪ್ರಮಾಣ ಸಂಖ್ಯೆಯಲ್ಲಿ ರಾಜ್ಯ 10ನೇ ಸ್ಥಾನದಲ್ಲಿದೆ, ಠಾಣೆಗೆ ಬರುವ ಜನಸಾಮಾನ್ಯರನ್ನು ಸ್ನೇಹಿತರಂತೆ ಕಾಣಬೇಕು. ರಾಜ್ಯದಲ್ಲಿ ಕೋಮು ಗಲಭೆ ಆಗಬಾರದು. ಪ್ರಚೋದನೆ ಮಾಡುವವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಜಾತಿ, ಧರ್ಮದ ನಡುವೆ ಭೇದ-ಭಾವ ಮಾಡಬಾರದು ಎಂದು ಹೇಳಿದರು. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮೊಕದ್ದಮೆಯಲ್ಲಿ ಎಸ್‍ಐಟಿ ತಂಡ ಅನೇಕ ಮಾಹಿತಿ ಕಲೆ ಹಾಕಿದೆ, ಪ್ರಕರಣದ ಬಂಧಿತ ಆರೋಪಿಗಳಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಡ್ ಕೊಟ್ಟಿದ್ದಾರೆ ಎನ್ನುವ ವಿಚಾರ ಸರಿಯಲ್ಲ, ಆರೋಪಿಗಳ ವಿಚಾರಣೆ ಮಾಡಲಾಗಿದೆ ಅಷ್ಟೇ ಎಂದರು.

Translate »