ಜಿಲ್ಲಾದ್ಯಂತ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
ಕೊಡಗು

ಜಿಲ್ಲಾದ್ಯಂತ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

January 9, 2019

ಮಡಿಕೇರಿ: ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲೆಯಲ್ಲಿರುವ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಲಾಯಿತು.
ನಗರದ ಗಾಂಧಿ ಮೈದಾನದ ಎದುರು ಪ್ರತಿಭಟಸಿದ ಕಾರ್ಮಿಕರು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ಅಂಗನ ವಾಡಿ ಸಂಘಟನೆಯ ಮುಖಂಡರಾದ ಟಿ.ಪಿ.ರಮೇಶ್, ದೇಶದಲ್ಲಿ 1991ರಲ್ಲಿ ಜಾರಿಗೆ ಬಂದ ಹೊಸ ಆರ್ಥಿಕ ನೀತಿ ಯನ್ನು ಇಂದಿನ ಕೇಂದ್ರ ಸರ್ಕಾರ ವೇಗವಾಗಿ ಜಾರಿ ಮಾಡುತ್ತಿವೆ. ಇದರ ಪರಿಣಾಮ ಇಂದು ದೇಶಕ್ಕೆ ಅನ್ನ ಕೊಡುವ ರೈತರು, ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕರು, ಸೇವೆಯನ್ನು ಮಾಡುವ ನೌಕರರು, ಕೂಲಿ ಯನ್ನು ನಂಬಿರುವ ಕೃಷಿ ಕೂಲಿ ಕಾರ್ಮಿಕರು ಗಂಭೀರವಾದ ಪರಿಸ್ಥಿತಿಯನ್ನು ಎದುರಿಸು ತ್ತಿದ್ದಾರೆ. ಮಾತ್ರ ವಲ್ಲದೇ ದೇಶದ ಆರ್ಥಿಕ ಸಾರ್ವ ಭೌಮತೆಗೆ ಧಕ್ಕೆ ತರುವಂತಹ ನೀತಿಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ. ಈ ಜನವಿರೋಧಿ ನೀತಿಯನ್ನು ಖಂಡಿಸಿ ದೇಶದ ಹತ್ತು ಕಾರ್ಮಿಕ ಸಂಘಟನೆಗಳು ಹೋರಾಟ ನಡೆಸು ತ್ತಿರುವುದಾಗಿ ತಿಳಿಸಿದರು.

ಕೇಂದ್ರ ಸರ್ಕಾರ ಕಾರ್ಮಿಕರ ಪ್ರಮುಖ ಬೇಡಿಕೆಗಳಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಹೊಸ ಹಾಗೂ ಸಭ್ಯ ಉದ್ಯೋಗಗಳನ್ನು ನಿರುದ್ಯೋಗಿ ಗಳಿಗೆ ನೀಡಬೇಕು, 7ನೇ ವೇತನ ಆಯೋಗ ಜಾರಿಗೊಳಿಸಿರುವ ಕನಿಷ್ಠ ವೇತನ ರೂ.18 ಸಾವಿರ ನೀಡಬೇಕು, ಕಾರ್ಮಿಕ ಕಾನೂನು ಗಳನ್ನು ಮೊಟಕುಗೊಳಿಸುವ ಕ್ರಮವನ್ನು ಕೈಬಿಡಬೇಕು, ಗುತ್ತಿಗೆ ಆಧಾರದ ನೌಕರ ರನ್ನು ಖಾಯಂಗೊಳಿಸಬೇಕು, ಸಾರ್ವ ಜನಿಕ ಉದ್ದಿಮೆಗಳನ್ನು ಖಾಸಗೀಕರಣ ಗೊಳಿಸಬಾರದು, ಕಾರ್ಮಿಕರಿಗೆ ಸಾಮಾಜಿಕ ರಕ್ಷಣೆ ಮತ್ತು ಭದ್ರತೆ ನೀಡಬೇಕು, ಕೃಷಿ ಬಿಕ್ಕಟ್ಟು ಮತ್ತು ರೈತರ ಆತ್ಮಹತ್ಯೆಗೆ ಪರಿಹಾರ ಸೂಚಿಸಲು ಡಾ.ಸ್ವಾಮಿನಾಥನ್ ವರದಿ ಜಾರಿಗೊಳಿಸುವುದು ಸೇರಿದಂತೆ ಕಾರ್ಮಿಕರು ಹಾಗೂ ಜನಸಾಮಾನ್ಯರ ಪರವಾದ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿದರು. ಜ.9 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿಯ ಚೌಕಿ ವೃತ್ತ (ಇಂದಿರಾ ಗಾಂಧಿ ವೃತ್ತ) ದಿಂದ ಗಾಂಧಿ ಮೈದಾನ ದವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ ಎಂದು ಈ ಸಂದರ್ಭ ತಿಳಿಸಿದರು.

ಪ್ರತಿಭಟನೆಯಲ್ಲಿ ಕೊಡಗು ಜಿಲ್ಲಾ ತೋಟ ಕಾರ್ಮಿಕರ ಸಂಘದ ಅಧ್ಯಕ್ಷ ಎನ್.ಡಿ. ಕುಟ್ಟಪ್ಪ, ಸಿ.ಐ.ಟಿ.ಯು ನ ಪ್ರಧಾನ ಕಾರ್ಯದರ್ಶಿ ಹೆಚ್.ಬಿ. ರಮೇಶ್, ಬಿಎಸ್ ಎನ್‍ಎಲ್ ನೌಕರರ ಸಂಘದ ಅಧ್ಯಕ್ಷ ವಿ.ಜೆ. ಅಂಥೋಣಿ, ಜೀವ ವಿಮ ನಿಗಮದ ಅಧ್ಯಕ್ಷ ಅನಂತೇಶ್ವರ ಸರಳಾಯ, ಆಸ್ಪತ್ರೆ ನೌಕರರ ಸಂಘದ ಗುತ್ತಿಗೆ ಕಾರ್ಮಿಕ ದಿಲ್‍ಶಾದ್, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘದ ತಾಲ್ಲೂಕು ಅಧ್ಯಕ್ಷೆ ವಿ.ಹೆಚ್. ನಾಗರತ್ನ, ಆಶಾ ಕಾರ್ಯಕರ್ತೆ ಸಂಘದ ಜಿಲ್ಲಾಧ್ಯಕ್ಷ ರಾದ ತೆಕ್ಕಡ ಪೂರ್ಣಿಮ, ಅಂಚೆ ಇಲಾಖೆ ಯ ಕಾರ್ಯದರ್ಶಿ ಬೇಬಿ, ಆಸ್ಪತ್ರೆ ಸ್ವಚತಾ ಕಾರ್ಮಿಕ ಸಂಘದ ಅಧ್ಯಕ್ಷರಾದ ಹೆಚ್.ಕೆ. ಜಾನಕಿ ಪಾಲ್ಗೊಂಡಿದ್ದರು.

Translate »