ಕಾಂಗ್ರೆಸ್ ಕಾರ್ಮಿಕ ವಿಭಾಗದಿಂದ ಶ್ರಮಿಕ ವರ್ಗ ಉಳಿಸಿ ಅಭಿಯಾನ
ಮೈಸೂರು

ಕಾಂಗ್ರೆಸ್ ಕಾರ್ಮಿಕ ವಿಭಾಗದಿಂದ ಶ್ರಮಿಕ ವರ್ಗ ಉಳಿಸಿ ಅಭಿಯಾನ

May 27, 2021

ಮೈಸೂರು, ಮೇ 26(ಆರ್‍ಕೆಬಿ)- ಕೋವಿಡ್ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿರುವ ಅಸಂಘಟಿತ ಕಾರ್ಮಿಕ ವರ್ಗದವರಿಗೆ ತಲಾ 10 ಸಾವಿರ ರೂ. ನೀಡಬೇಕು. ಕೋವಿಡ್‍ಗೆ ಬಲಿಯಾದವರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ಮೈಸೂರು ಜಿಲ್ಲಾ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ವತಿಯಿಂದ ಬುಧವಾರ ಮೈಸೂರಿನ ಜಿಲ್ಲಾ ಕಾಂಗ್ರೆಸ್ ಭವನದ ಆವರಣದಲ್ಲಿ ಶ್ರಮಿಕ ವರ್ಗ ಉಳಿಸಿ ಅಭಿಯಾನ ನಡೆಸಲಾಯಿತು.
¸
Àಮಿತಿಯ ಅಧ್ಯಕ್ಷ ಹೆಚ್.ಕೆ.ಮಂಜುನಾಥ್, ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಆರ್‍ಟಿಐ ಘಟಕದ ರಾಜ್ಯ ಕಾರ್ಯದರ್ಶಿ ಕವಿತಾ ಕಾಳೆ ನೇತೃತ್ವದಲ್ಲಿ ಅಭಿಯಾನ ನಡೆಯಿತು. ಕಳೆದ 17 ತಿಂಗಳಿಂದ ಮಹಾಮಾರಿ ಕೊರೊನಾ ಉಪಟಳದಿಂದ ಕಟ್ಟಡ ಕಾರ್ಮಿಕರು ಅಸಂಘಟಿತ ಕಾರ್ಮಿಕರು ಜೀವನ ನಡೆಸಲಾಗದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ 2,000 ಮತ್ತು 3,000 ಪ್ಯಾಕೇಜ್ ಹಣದಿಂದ ಇಂದಿನ ಬೆಲೆ ಏರಿಕೆ ಪರಿಸ್ಥಿತಿಯಲ್ಲಿ ಯಾವುದಕ್ಕೂ ಸಾಕಾಗುವುದಿಲ್ಲ. ಹಾಗಾಗಿ ರಾಜ್ಯ ಸರ್ಕಾರ ತಕ್ಷಣ ತಲಾ 10,000 ರೂ. ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಕೋವಿಡ್‍ನಿಂದ ಮೃತಪಟ್ಟ ಶ್ರಮಿಕ ವರ್ಗದ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಬೇಕು. ಅವರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳ ಬೇಕು. ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿರುವ 7 ಸಾವಿರ ಕೋಟಿ ಹಣವನ್ನು ಕೂಡಲೇ ಶ್ರಮಿಕ ವರ್ಗದವರಿಗಾಗಿ ಬಳಸಿಕೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

 

Translate »