ಭ್ರಷ್ಟಾಚಾರ ನಿಯಂತ್ರಿಸದಿದ್ದರೆ ಕಾಮಗಾರಿ ಸ್ಥಗಿತ
News

ಭ್ರಷ್ಟಾಚಾರ ನಿಯಂತ್ರಿಸದಿದ್ದರೆ ಕಾಮಗಾರಿ ಸ್ಥಗಿತ

April 14, 2022

ಬೆಂಗಳೂರು, ಏ. 13- ಭ್ರಷ್ಟಾಚಾರ ನಿಯಂತ್ರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ರಾಜ್ಯದಾ ದ್ಯಂತ ಒಂದು ತಿಂಗಳ ಕಾಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.

ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕ ರಣದ ಕುರಿತು ಬುಧವಾರ ನಡೆದ ಸಂಘದ ಆಡಳಿತ ಮಂಡಳಿ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಈ ವಿಷಯ ತಿಳಿಸಿದರು.

ಪ್ರಧಾನಿ, ಮುಖ್ಯಮಂತ್ರಿ, ರಾಜ್ಯಪಾಲರಿಗೆ ದೂರು ನೀಡಿದರೂ ಭ್ರಷ್ಟಾಚಾರ ನಿಯಂತ್ರಣಕ್ಕೆ ಬಂದಿಲ್ಲ. ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದಾಗಿಯೇ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಸರ್ಕಾರವೇ ಹೊಣೆ ಎಂದರು.
ಮುಂದಿನ ವಾರ ಸಂಘದ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗುವುದು. ಸರ್ಕಾರದಲ್ಲಿನ ಭ್ರಷ್ಟಾಚಾರ ಕುರಿತು ಸಭೆಯಲ್ಲಿ ಚರ್ಚಿಸಲಾಗು ವುದು. ಸರ್ಕಾರದ ಧೋರಣೆ ವಿರೋ ಧಿಸಿ ಒಂದು ತಿಂಗಳ ಕಾಲ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸ ಲಾಗುವುದು. ಭ್ರಷ್ಟಾಚಾರ ಮತ್ತು ಗುತ್ತಿಗೆದಾರರಿಗೆ ನೀಡುತ್ತಿರುವ ಕಿರು ಕುಳ ವಿರೋಧಿಸಿ ಮೇ 25ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾ ಗುವುದು. 50,000 ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕೆಂಪಣ್ಣ ತಿಳಿಸಿದರು.

15 ದಿನ ಗಡುವು: ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರ ನಿಯಂತ್ರಣಕ್ಕೆ ಮುಖ್ಯಮಂತ್ರಿಯವರಿಗೆ 15 ದಿನಗಳ ಕಾಲ ಅವಕಾಶ ನೀಡಲಾಗುವುದು. ಅಷ್ಟರೊಳಗೆ ಅವರು ಸಭೆ ನಡೆಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ತಪ್ಪಿದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ರಾಜ್ಯ ಸರ್ಕಾರದ ಐದಾರು ಮಂದಿ ಸಚಿವರು ಮತ್ತು 20ಕ್ಕೂ ಹೆಚ್ಚು ಶಾಸಕರು ಭ್ರಷ್ಟಾಚಾರದಲ್ಲಿ ನಿರತ ರಾಗಿರುವ ಕುರಿತು ದಾಖಲೆಗಳಿವೆ. 15 ದಿನಗಳ ಬಳಿಕ ಅವುಗಳನ್ನು ಬಹಿರಂಗಪಡಿಸಲಾಗುವುದು ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ ಡಿ.ಕೆಂಪಣ್ಣ ಹೇಳಿದರು.

ರಾಜೀನಾಮೆಗೆ ಆಗ್ರಹ: ಸಂತೋಷ್ ಆತ್ಮಹತ್ಯೆಗೆ ಸಚಿವ ಕೆ.ಎಸ್. ಈಶ್ವರಪ್ಪ ನೇರ ಹೊಣೆ. ಅವರಿಂದ ತಕ್ಷಣ ರಾಜೀನಾಮೆ ಪಡೆಯಬೇಕು ಎಂದು ಕೆಂಪಣ್ಣ ಒತ್ತಾಯಿಸಿದರು. ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ಇಲ್ಲವೇ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.

ಸಂತೋಷ್ ಪಾಟೀಲ ಅವರು ಮಾಡಿರುವ ಕಾಮ ಗಾರಿಗಳ ಬಾಬ್ತು ರೂ. 4 ಕೋಟಿಯನ್ನು ತಕ್ಷಣ ಬಿಡುಗಡೆ ಮಾಡಬೇಕು. ಅವರ ಕುಟುಂಬಕ್ಕೆ ರೂ. 2 ಕೋಟಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

Translate »