ಹರವೆಯಲ್ಲಿ ಜಾಗತಿಕ ಸ್ತನ್ಯಪಾನ ಸಪ್ತಾಹ ಆಚರಣೆ
ಚಾಮರಾಜನಗರ

ಹರವೆಯಲ್ಲಿ ಜಾಗತಿಕ ಸ್ತನ್ಯಪಾನ ಸಪ್ತಾಹ ಆಚರಣೆ

August 9, 2018

ಚಾಮರಾಜನಗರ: ತಾಲೂಕಿನ ಹರವೆ ಗ್ರಾಮದಲ್ಲಿ ಮಂಗಳವಾರ 26ನೇ ಜಾಗತಿಕ ಸ್ತನ್ಯಪಾನ ಸಪ್ತಾಹವನ್ನು ಆಚರಿಸಲಾಯಿತು.
ಚಾಮರಾಜನಗರ ರೋಟರಿ ಸಂಸ್ಥೆ, ರೋಟರಿ ಸಿಲ್ಕ್ ಸಿಟಿ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಹರವೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಸಪ್ತಾಹವನ್ನು ಆಚ ರಿಸಲಾಯಿತು. ಸ್ತನ್ಯಪಾನ ಸಪ್ತಾಹದ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಲಾಯಿತು.

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳು ತಾಯಿಯ ಎದೆ ಹಾಲಿನ ಮಹತ್ವವನ್ನು ತಿಳಿಸುವ ಕಿರು ನಾಟಕವನ್ನು ಪ್ರದರ್ಶಿಸಿದರು. ಇದು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಯಿತು. 53 ಮಂದಿ ಬಾಣಂತಿಯರು ಹಾಗೂ ಗರ್ಭಿಣಿಯರಿಗೆ ಪ್ರೋಟಿನ್ ಯುಕ್ತ ಪೌಡರ್‍ಅನ್ನು ಇದೇ ವೇಳೆ ವಿತರಿಸಲಾಯಿತು.

ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ಹೆಗ್ಗವಾಡಿಪುರ ಆಜಯ್, ನಿರ್ದೇಶಕರಾದ ಆಶ್ರೀತ್ ಅರಸ್, ರೋಟರಿ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಶ್ರೀನಿವಾಸ್, ವಿಜ್ಞಾನ ಸಂಸ್ಥೆಯ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಗಿರೀಶ್, ಪ್ರಾಧ್ಯಾಪಕರಾದ ಡಾ.ದಮಯಂತಿ, ಡಾ.ಶಶಾಂಕ್, ಡಾ.ಚೇತನ್, ಹರವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುರೇಶ್ ಇತರರು ಉಪಸ್ಥಿತರಿದ್ದರು.

Translate »