ಇಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಮೈಸೂರು

ಇಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

June 12, 2018

ಮೈಸೂರು:  ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆ ಗಳ ಪ್ರಾಧಿಕಾರ, ಜಿಲ್ಲಾ ಬಾಲಾಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾ ಚರಣೆಯನ್ನು ಜೂ.12ರಂದು ಬೆಳಿಗ್ಗೆ 10 ಗಂಟೆಗೆ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿ ಯರ್ಸ್ ಸಭಾಂಗಣದಲ್ಲಿ ಆಚರಿಸಲಾಗುವುದು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ. ವಂಟಿಗೊಡಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಉಪ ಪೊಲೀಸ್ ಆಯುಕ್ತ ಎನ್. ವಿಷ್ಣುವರ್ಧನ ಅಧ್ಯಕ್ಷತೆ ವಹಿಸುವರು. ವಕೀಲ ಸುಂದರ್‍ರಾಜ್ ಎನ್ ಅವರು ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಕುರಿತು ಉಪನ್ಯಾಸ ನೀಡುವರು.

Translate »