ಜೂ.12ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಮೈಸೂರು

ಜೂ.12ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

June 9, 2018

ಮೈಸೂರು:  ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಜೂ.12ರಂದು ಬೆಳಿಗ್ಗೆ 10 ಗಂಟೆಗೆ ಜೆ.ಎಲ್.ಬಿ. ರಸ್ತೆಯಲ್ಲಿರುವ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರ್ಸ್‍ನಲ್ಲಿ ನಡೆಯಲಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಎಸ್.ಕೆ. ವಂಟಿಗೊಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೈಸೂರು ನಗರ ಕಾನೂನು ಮತ್ತು ಸುವ್ಯಸ್ಥೆ ಉಪ ಪೊಲೀಸ್ ಆಯುಕ್ತ ಎನ್.ವಿಷ್ಣುವರ್ಧನ ಅವರು ಅಧ್ಯಕ್ಷತೆ ವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ರಾಧ ಕೆ., ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಮತ ಎಸ್. ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಹೆಚ್., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಆರ್.ರಾಜು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿರುವರು.

Translate »