ವಿಶ್ವ ತಂಬಾಕು ದಿನಾಚರಣೆ: ತಂಬಾಕಿನ ಅಪಾಯದ ಬಗ್ಗೆ ಮನವರಿಕೆ
ಮೈಸೂರು

ವಿಶ್ವ ತಂಬಾಕು ದಿನಾಚರಣೆ: ತಂಬಾಕಿನ ಅಪಾಯದ ಬಗ್ಗೆ ಮನವರಿಕೆ

June 1, 2018

ಎಚ್.ಡಿ.ಕೋಟೆ:  ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಲಾಯಿತು.

ತಾಲೂಕು ವೈದ್ಯಾಧಿಕಾರಿ ರವಿಕುಮಾರ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ತಂಬಾಕು ಸೇವನೆಯ ದುಶ್ಚಟಕ್ಕೆ ಒಳಗಾಗುತ್ತಿದ್ದಾರೆ. ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್‍ನಂತಹ ಮಾರಕ ರೋಗಗಳಿಗೆ ತುತ್ತಾಗಿ ತಮ್ಮ ಅಮೂಲ್ಯ ಜೀವನ ವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಜನಸಾಮಾನ್ಯರು ತಂಬಾಕು ಸೇವನೆಯಿಂದ ದೂರವಿದ್ದು, ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಇದಕ್ಕಾಗಿ ಎಲ್ಲಾ ರೀತಿಯ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಇಲಾಖೆ ಮಾಡುತ್ತಾ ಬಂದಿದೆ ಎಂದರು. ನಂತರ ತಂಬಾಕು ಸೇವನೆ ಯಿಂದಾಗುವ ದುಷ್ಟರಿಣಾಮಗಳ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಭಾಸ್ಕರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಉದಯ್ ಕುಮಾರ್, ನಾಗೇಂದ್ರ, ಉದ್ಭವ ಟ್ರಸ್ಟ್‍ನ ವ್ಯವಸ್ಥಾಪಕ ನಂಜುಂಡಸ್ವಾಮಿ, ನವೀನ್ ಕುಮಾರ್, ಆಶಾ ಕಾರ್ಯಕರ್ತೆಯರು, ಇಲಾಖೆ ಸಿಬ್ಬಂದಿ ಇದ್ದರು.

Translate »