ಪ್ರವಾಸೋದ್ಯಮ ಇಲಾಖೆ ರಾಯಭಾರಿಯಾಗಿ ರಾಜವಂಶಸ್ಥ ಯದುವೀರ್ ಅಧಿಕೃತ ಆಯ್ಕೆ
ಮೈಸೂರು

ಪ್ರವಾಸೋದ್ಯಮ ಇಲಾಖೆ ರಾಯಭಾರಿಯಾಗಿ ರಾಜವಂಶಸ್ಥ ಯದುವೀರ್ ಅಧಿಕೃತ ಆಯ್ಕೆ

December 30, 2018

ಮೈಸೂರು: ಪ್ರವಾಸೋದ್ಯಮ ಇಲಾಖೆಯ ರಾಯಭಾರಿಯಾಗಿ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಆಯ್ಕೆ ಮಾಡಲಾಗಿದೆ.

ಮೈಸೂರಿನ ಲಲಿತಮಹಲ್ ಹೋಟೆಲ್ ಸಭಾಂಗಣದಲ್ಲಿ ನಡೆದ ಪ್ರವಾಸೋದ್ಯಾಮ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸರ್ಕಾರದ ಸೂಚನೆಯ ಮೇರೆಗೆ ಪ್ರವಾಸೋದ್ಯಮ ಇಲಾಖೆಯ ರಾಯಭಾರಿಯಾಗಿ ನಿಯೋಜಿಸಲಾಯಿತು. ಅಲ್ಲದೆ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ನಂತರ ಶೀಘ್ರದಲ್ಲಿಯೇ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ನೇತೃತ್ವ ಹಾಗೂ ರಾಯಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಮ್ಮುಖದಲ್ಲಿ ಸಭೆ ಆಯೋಜಿಸಿ ಚರ್ಚಿಸಲು ನಿರ್ಧರಿಸಲಾಯಿತು.

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಬಿ.ರಾಮು, ಜೆಎಲ್‍ಆರ್ ವ್ಯವಸ್ಥಾಪಕ ನಿರ್ದೇಶಕ ವಿಜಯ್ ಶರ್ಮ, ಕೆಎಸ್‍ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Translate »