ಹತ್ಯೆ ಸಂಚು ಖಂಡಿಸಿ ಯಶ್ ಅಭಿಮಾನಿಗಳ ಪ್ರತಿಭಟನೆ
ಮೈಸೂರು

ಹತ್ಯೆ ಸಂಚು ಖಂಡಿಸಿ ಯಶ್ ಅಭಿಮಾನಿಗಳ ಪ್ರತಿಭಟನೆ

July 17, 2018

ಮೈಸೂರು:  ಕನ್ನಡದ ನಾಯಕ ನಟ ಯಶ್ ಕೊಲೆ ಸಂಚಿಗೆ ಸಂಬಂಧಿಸಿದಂತೆ ತನಿಖೆ ನಡೆಸಬೇಕೆಂದು ಆಗ್ರಹಿಸಿ ಅಖಿಲ ಕರ್ನಾಟಕ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಬಳಗದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧೀ ಪುತ್ಥಳಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ನಟ ಯಶ್ ಅವರ ಕೊಲೆಗೆ ಸಂಚು ರೂಪಿಸಿದ್ದ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಕೊಲೆ ಸಂಚು ನಡೆಸಿರುವ ವ್ಯಕ್ತಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಬಂಧಿಸಿ ಕಾನೂನಿನಂತೆ ಕಠಿಣ ಶಿಕ್ಷೆ ವಿಧಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಬೇಕು. ಜೊತೆಗೆ ನಟ ಯಶ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಯಶ್ ಅಭಿಮಾನಿಗಳ ಬಳಗದ ವತಿಯಿಂದ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಬಳಗದ ಜಿಲ್ಲಾಧ್ಯಕ್ಷ ಮನು ಅಪ್ಪಿ, ಮುಖಂಡ ಬಿ.ಎಂ.ರಘು ಸೇರಿದಂತೆ ಹಲವು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »