ಸಿಎಂ ಸ್ಥಾನದಿಂದ ಯಡಿಯೂರಪ್ಪ ಬದಲಾಗಲ್ಲ, ಅವರು ರಾಜಾಹುಲಿನೇ
ಮೈಸೂರು

ಸಿಎಂ ಸ್ಥಾನದಿಂದ ಯಡಿಯೂರಪ್ಪ ಬದಲಾಗಲ್ಲ, ಅವರು ರಾಜಾಹುಲಿನೇ

July 21, 2021

ಮೈಸೂರು,ಜು.20(ಪಿಎಂ)-ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಕೆಳಗಿಳಿಸಲಾಗು ತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಕಾ.ಪು.ಸಿದ್ದಲಿಂಗಸ್ವಾಮಿ, ಯಾವುದೇ ಕಾರಣಕ್ಕೂ ಯಡಿಯೂರಪ್ಪ ನವರು ಸಿಎಂ ಸ್ಥಾನದಿಂದ ಬದಲಾವಣೆ ಆಗಲ್ಲ. ಅವ ರನ್ನು ರಾಜಾಹುಲಿ ಎನ್ನುತ್ತಾರೆ. ಹಾಗೇ ಅವರು ರಾಜಾ ಹುಲಿನೇ ಎಂದು ಅತೀವ ಅಭಿಮಾನ ವ್ಯಕ್ತಪಡಿಸಿದರು.
ಮೈಸೂರಿನ ಬಸವೇಶ್ವರ ಪ್ರತಿಮೆ ಬಳಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತ ನಾಡಿದ ಅವರು, ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಯಡಿಯೂರಪ್ಪ ಬಿಜೆಪಿಗೆ ಆತ್ಮ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹೇಳಿದ್ದು, ಅಂತೆಯೇ ಅವರು ನಮ್ಮ ಪಕ್ಷದ ಆತ್ಮ. ಬದಲಾವಣೆ ಆಗುತ್ತಾರೆಂಬ ಊಹಾ ಪೋಹಗಳಿಗೆ ಪುಷ್ಪಿಕೊಡುವ ಅಗತ್ಯವಿಲ್ಲ ಎಂದು ಕಾಪು ಸಿದ್ದಲಿಂಗಸ್ವಾಮಿ ತಿಳಿಸಿದರು.

ಯಡಿಯೂರಪ್ಪನವರು ನನಗೆ ಜವಾಬ್ದಾರಿ ನೀಡಿದ್ದಾರೆ. ಹಿಂದುಳಿದವರು, ದೀನದಲಿತರಿಗೆ ಪ್ರವಾಸೋದ್ಯಮ ಇಲಾಖೆಯಿಂದ ದೊರೆಯುವ ಸೌಲಭ್ಯ ಕಲ್ಪಿಸಲು ನನ್ನ ಅವಧಿಯಲ್ಲಿ ಆದ್ಯತೆ ನೀಡುತ್ತೇವೆ. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಶ್ರಮವಹಿಸಿ ಕೆಲಸ ಮಾಡುತ್ತೇನೆ. ಈಗಾಗಲೇ ಪ್ರವಾಸೋದ್ಯಮ ಸಚಿವರು ಹಲವು ಕಾರ್ಯ ಕ್ರಮ ಹಮ್ಮಿಕೊಂಡಿದ್ದು, ಅವರ ಜೊತೆಗೂಡಿ ನಾನು ಕೆಲಸ ಮಾಡುತ್ತೇನೆ. ಹೊಸ ಹೊಸ ಕಾರ್ಯಕ್ರಮಗಳನ್ನು ಅಳವಡಿಸುವ ಚಿಂತನೆ ಇದೆ. ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡು ತ್ತೇನೆ ಎಂದು ತಿಳಿಸಿದರು.

Translate »