ಯಡಿಯೂರಪ್ಪ ಬಿಜೆಪಿಯ ಪ್ರಶ್ನಾತೀತ ನಾಯಕ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್‍ಕುಮಾರ್‍ಗೌಡ
ಮೈಸೂರು

ಯಡಿಯೂರಪ್ಪ ಬಿಜೆಪಿಯ ಪ್ರಶ್ನಾತೀತ ನಾಯಕ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್‍ಕುಮಾರ್‍ಗೌಡ

March 1, 2021

ಮೈಸೂರು, ಫೆ.28-ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಮೂಲಕ ದಕ್ಷಿಣ ಭಾರತದಲ್ಲಿ ಕೇಸರಿ ಬಾವುಟ ಹಾರಿ ಸಲು ಮುನ್ನುಡಿ ಬರೆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿಯ ಪ್ರಶ್ನಾತೀತ ನಾಯಕ ಎಂದು ಕರ್ನಾಟಕ ವಸ್ತುಪ್ರದ ರ್ಶನ ಪ್ರಾಧಿಕಾರ ಅಧ್ಯಕ್ಷ ಹೇಮಂತ್ ಕುಮಾರ್‍ಗೌಡ ತಿಳಿಸಿದರು.

ಬಿ.ಎಸ್.ಯಡಿಯೂರಪ್ಪರವರ 79ನೇ ಜನ್ಮ ದಿನಾಚರಣೆ ಅಂಗ ವಾಗಿ 101 ಗಣಪತಿ ದೇವಸ್ಥಾನ ಮುಂಭಾಗ 79 ಕೆ.ಜಿ. ತೂಕದ ಬೃಹತ್ ಗಾತ್ರದ ಕೇಕ್ ಕತ್ತರಿಸುವ ಮೂಲಕ ಅವರ ಜನ್ಮ ದಿನಾಚರಣೆ ಆಚರಿಸಿ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಕೇವಲ 2 ಸ್ಥಾನದಿಂದ ಆರಂಭವಾದ ಬಿಜೆಪಿ ಹೋರಾಟಕ್ಕೆ ಸಮಗ್ರ ಪುಷ್ಟಿ ನೀಡಿ, ನಾಡಿನಾದ್ಯಂತ ಸಂಘಟನೆಯಿಂದ ಅಧಿಕಾರ ಹಿಡಿಯಲು ಯಡಿ ಯೂರಪ್ಪರು ಶ್ರಮಿಸಿದ್ದು ನಿಜಕ್ಕೂ ಮೆಚ್ಚಲೇ ಬೇಕಾದ ವಿಷಯ. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ದೀನ-ದಲಿತರಿಗೆ ಮತ್ತು ರೈತಾಪಿ ಕೂಲಿ ಕಾರ್ಮಿಕರಿಗೆ ಜನಪರ ಯೋಜನೆಗಳನ್ನು ಜಾರಿ ಮಾಡಿ ಅಭಿವೃದ್ಧಿಯ ಹರಿಕಾರ ಮತ್ತು ನಿಜವಾದ ಮಣ್ಣಿನ ಮಗ ಎನಿಸಿಕೊಂಡಿದ್ದಾರೆ ಎಂದರು. ಇದೇ ವೇಳೆ ಅಪೂರ್ವ ಸುರೇಶ್, ಮುಖಂಡ ನಿಂಗರಾಜು, ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ಉಪಾಧ್ಯಕ್ಷ ಋಷವೇಂದ್ರ, ಮುರುಡಗಳ್ಳಿ ಉಪಾಧ್ಯಕ್ಷರು, ಬಿಜೆಪಿ ಯುವ ಮೋರ್ಚಾ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಮಲ್ಲೇಶ್, ಗೆಜ್ಜಗಳ್ಳಿ ನಂಜಪ್ಪ, ಮಂಜುನಾಥ್ ಇನ್ನಿತರರು ಹಾಜರಿದ್ದರು

 

 

Translate »