ಬೆಂಗಳೂರು: ವಿಧಾನ ಸಭೆ ವಿಪಕ್ಷ ನಾಯಕ ರಾಗಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಬಿ.ಎಸ್.ಯಡಿ ಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಶಾಸ ಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ವಿಪಕ್ಷದ ಮುಖ್ಯ ಸಚೇತಕರಾಗಿ ಕಾರ್ಕಳದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು. ಅಲ್ಲದೇ ನಾಳೆ (ಮೇ 25) ನಡೆಯಲಿರುವ ವಿಶ್ವಾಸ ಮತದ ಯಾಚನೆ ವೇಳೆ ವಿಶ್ವಾಸಮತದ ವಿರುದ್ಧ ಮತ ಚಲಾಯಿಸುವಂತೆ ಬಿಜೆಪಿಯ ಎಲ್ಲಾ ಶಾಸಕರಿಗೂ ವ್ಹಿಪ್ ಜಾರಿ ಮಾಡಲಾಗಿದೆ.