ಮೈಸೂರು, ಆ.28- ತುಂಬಿ ತುಳುಕುತ್ತಿರುವ ಕೃಷ್ಣರಾಜಸಾಗರ ಜಲಾಶಯದಲ್ಲಿ ನಾಳೆ (ಗುರುವಾರ) ಮಧ್ಯಾಹ್ನ 12.30 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾವೇರಿ ಮಾತೆಯ ಪೂಜೆ ಹಾಗೂ ಬಾಗಿನ ಸಮರ್ಪಣೆ ಮಾಡಲಿದ್ದಾರೆ.
ಉಪ ಮುಖ್ಯಮಂತ್ರಿಗಳಾದ ಗೋವಿಂದ ಮಕ್ತಪ್ಪ ಕಾರಜೋಳ, ಡಾ|| ಸಿ.ಎಸ್. ಅಶ್ವತ್ಥ ನಾರಾಯಣ, ಲಕ್ಷ್ಮಣ ಸಂಗಪ್ಪ ಸವದಿ ಹಾಗೂ ವಸತಿ ಸಚಿವರೂ ಆದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಭಾಗವಹಿಸುವರು.
ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಅಧ್ಯಕ್ಷತೆ ವಹಿಸುವರು. ಮಂಡ್ಯ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಎಸ್. ನಾಗರತ್ನಸ್ವಾಮಿ, ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪರಿಮಳ ಶ್ಯಾಂ, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಪುಷ್ಟಲತಾ ಜಗನ್ನಾಥ್, ಲೋಕಸಭಾ ಸದಸ್ಯರಾದ ಪ್ರತಾಪಸಿಂಹ, ಸುಮಲತಾ ಅಂಬರೀಷ್, ವಿಧಾನಸಭಾ ಸದಸ್ಯರಾದ ಡಿ.ಸಿ ತಮ್ಮಣ್ಣ, ಸಿ.ಎಸ್ ಪುಟ್ಟರಾಜು, ಎಂ. ಶ್ರೀನಿವಾಸ್, ಕೆ.ಸುರೇಶ್‍ಗೌಡ, ಡಾ||ಕೆ.ಅನ್ನದಾನಿ, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ತನ್ವೀರ್‍ಸೇಠ್, ಕೆ.ಮಹದೇವ್, ಡಾ.ಯತೀಂದ್ರ.ಎಸ್, ಹರ್ಷವರ್ಧನ್, ಅಶ್ವಿನ್ ಕುಮಾರ್, ಎಸ್.ಎ.ರಾಮದಾಸ್, ಅನಿಲ್‍ಕುಮಾರ್.ಸಿ, ವಿಧಾನ ಪರಿಷತ್ ಸದಸ್ಯರಾದ ಮರಿ ತಿಬ್ಬೇಗೌಡ, ಎಸ್.ನಾಗ ರಾಜು, ಆರ್.ಧರ್ಮಸೇನ, ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿಗೌಡ, ಮಂಡ್ಯ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಪಿ.ಕೆ ಗಾಯತ್ರಿ ರೇವಣ್ಣ, ಶ್ರೀರಂಗಪಟ್ಟಣ ತಾಲೂಕು ಪಂಚಾಯತ್ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ನಮದಾಮಣಿ ಚಂದ್ರಶೇಖರ್, ಬೆಳಗೋಳ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯೆ ಬಿ.ಜೆ ಸವಿತಾ ಲೋಕೇಶ್, ಕೃಷ್ಣರಾಜ ಸಾಗರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅನಿತಾ ನಾಗೇಂದ್ರ, ಉಪಾಧ್ಯಕ್ಷ ಕೆ. ರಾಜು ಸಮಾರಂಭದ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.