ಮೈಸೂರಲ್ಲಿ 15 ಸಾವಿರ ಮಂದಿಗೆ ಪ್ರಧಾನಿ ಮೋದಿಯೊಂದಿಗೆ ಯೋಗಾ ಮಾಡುವ ಯೋಗ
News

ಮೈಸೂರಲ್ಲಿ 15 ಸಾವಿರ ಮಂದಿಗೆ ಪ್ರಧಾನಿ ಮೋದಿಯೊಂದಿಗೆ ಯೋಗಾ ಮಾಡುವ ಯೋಗ

June 8, 2022

ಬೆಂಗಳೂರು, ಜೂ.7- ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಮೈಸೂರು ಅರಮನೆ ಆವರಣದಲ್ಲಿ 15 ಸಾವಿರ ಜನರು ಯೋಗ ಮಾಡಲಿದ್ದಾರೆ.
ಈ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ 15 ಸಾವಿರ ಯೋಗಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಜೂನ್ 13ರೊಳಗೆ ಪೂರ್ಣ ಗೊಳಿಸುವಂತೆ ಮೈಸೂರು ಜಿಲ್ಲಾಧಿಕಾರಿಗೆ ಸೂಚಿಸಿದರು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನಮಂತ್ರಿಗಳ ಕಚೇರಿ ಸೂಚಿಸಿದಂತೆ ಸಮಾಜದ ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ತಿಳಿಸಿದರು.

ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಸಾರಿಗೆ ಸೌಲಭ್ಯ, ಲಘು ಉಪಾಹಾರ, ಕುಡಿಯುವ ನೀರು ಮತ್ತಿತರ ವ್ಯವಸ್ಥೆಗಳನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸಬೇಕು. ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ಸಾಧಿಸುವಂತೆ ಸೂಚಿಸಿದರು. ಇದರೊಂದಿಗೆ ಕೇಂದ್ರ ಆಯುಷ್ ಸಚಿವಾಲಯವು ಯೋಗಕ್ಕೆ ಸಂಬಂಧಿಸಿ ದಂತೆ ವಸ್ತುಪ್ರದರ್ಶನವನ್ನು ಸಹ ಏರ್ಪಡಿಸಿದೆ. ಇದಕ್ಕೆ ಅಗತ್ಯ ಸಹಕಾರವನ್ನು ನೀಡುವಂತೆಯೂ ಸೂಚಿಸಿದರು. ಈ ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಕೋರ್ ಕಮಿಟಿ ಸೇರಿದಂತೆ ಒಟ್ಟು 14 ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಗಳು ಎಚ್ಚರಿಕೆಯಿಂದ ತಮ್ಮ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿ ಸುವಂತೆ ಸೂಚಿಸಿದರು. ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪೆÇಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ 5 ತಾಣಗಳಾದ ಮೈಸೂರು, ಹಳೇಬೀಡು, ಹಂಪಿ, ಪಟ್ಟದಕಲ್ ಹಾಗೂ ವಿಜಯಪುರದ ಗೋಲಗುಂಬಜ್ ಈ ಕಾರ್ಯಕ್ರಮಕ್ಕೆ ಆಯ್ಕೆಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಹಳೇಬೀಡಿನಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಹಂಪಿಯಲ್ಲಿ ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಷಿ, ಪಟ್ಟದಕಲ್ಲಿನಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ವಿಜಯಪುರದ ಗೋಲಗುಂಬಜ್‍ನಲ್ಲಿ ನವೀಕರಿಸಬಹು ದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಪಾಲ್ಗೊಳ್ಳಲಿದ್ದಾರೆ. ಇದಲ್ಲದೆ ರಾಜ್ಯಮಟ್ಟದ 75 ಐತಿಹಾಸಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗುವುದು. ಸಭೆಯಲ್ಲಿ ಸಚಿವರಾದ ಡಾ.ಕೆ.ಸುಧಾಕರ್, ಎಸ್.ಟಿ. ಸೋಮಶೇಖರ್, ನಾರಾಯಣಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥಪ್ರಸಾದ್, ಯೋಜನೆ ಹಾಗೂ ಯುವಸಬಲೀ ಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಪೆÇಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯ ದರ್ಶಿ ಟಿ.ಕೆ.ಅನಿಲ್‍ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು

Translate »