ಮತ್ತೆ ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪದಗ್ರಹಣ
News

ಮತ್ತೆ ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪದಗ್ರಹಣ

March 26, 2022

ಲಖನೌ, ಮಾ.25- ಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯೋಗಿ ಆದಿತ್ಯನಾಥ್ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿ ಯಾಗಿ ಶುಕ್ರವಾರ ಪದಗ್ರಹಣ ಮಾಡಿದರು.

ಅಟಲ್ ಬಿಹಾರ ವಾಜಪೇಯಿ ಎಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿ ಗಳ ಸಮ್ಮುಖದಲ್ಲಿ ಯೋಗಿ ಆದಿತ್ಯನಾಥ್ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಪ್ರಮಾಣ ವಚನ ಬೋಧಿ ಸಿದರು. ಹಾಗೂ ಸುಮಾರು 85, 000 ಜನರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಇದೇ ಸಂದರ್ಭದಲ್ಲಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಉತ್ತರ ಪ್ರದೇಶದ ನೂತನ ಉಪ ಮುಖ್ಯಮಂತ್ರಿ ಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. 52 ಮಂದಿ ಸಚಿವರು: ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಜಿತಿನ್ ಪ್ರಸಾದ್ ಸೇರಿದಂತೆ 52 ಶಾಸಕರು ಇಂದು ಮುಖ್ಯಮಂತ್ರಿ ಆದಿತ್ಯನಾಥ್ ಅವರೊಂದಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಭೂಪೇಂದ್ರ ಸಿಂಗ್ ಚೌಧರಿ, ಅನಿಲ್ ರಾಜಭರ್, ರಾಕೇಶ್ ಸಚಾನ್ ಮತ್ತಿತರ 52 ಶಾಸಕರು ಪ್ರಮಾಣ ವಚನ ಸ್ವೀಕರಿಸಿ ದರು. ಸತತವಾಗಿ ಎರಡನೇ ಅವಧಿಗೆ ಮುಖ್ಯ ಮಂತ್ರಿ ಹುದ್ದೆಗೇರಿದ ಯೋಗಿ ಆದಿತ್ಯ ನಾಥ್, ಸಂಪುಟ ಸಚಿವರೊಂದಿಗೆ ಟೀ ಅಥವಾ ಬೋಜನ ಕೂಟ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇಂದು ತಡರಾತ್ರಿ ಅಥವಾ ನಾಳೆ ಬೆಳಗ್ಗೆ ಖಾತೆ ಹಂಚಿಕೆ ನಡೆಯಲಿದ್ದು, ಬಳಿಕ ಸೂಕ್ತ ಸಂಪುಟ ಸಭೆ ನಡೆಯಲಿದೆ ಎಂಬ ಮಾಹಿತಿ ತಿಳಿದುಬಂದಿದೆ.

Translate »