ಮಾತ್ರೆ ಸೇವಿಸಿ ಯುವಕ ಆತ್ಮಹತ್ಯೆ
ಮೈಸೂರು

ಮಾತ್ರೆ ಸೇವಿಸಿ ಯುವಕ ಆತ್ಮಹತ್ಯೆ

April 26, 2018

ತಿ.ನರಸೀಪುರ: ಆಗಾಗ ಬಾಧಿಸುತ್ತಿದ್ದ ಹೊಟ್ಟೆ ನೋವು ತಾಳಲಾರದೆ ಯುವಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬನ್ನಹಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ತಾಲೂಕಿನ ಬನ್ನಹಳ್ಳಿಹುಂಡಿ ಗ್ರಾಮದ ಆರ್.ಚಂದ್ರಪ್ಪ ಎಂಬು ವರ ಪುತ್ರ ಭಾರ್ಗವಿ ಪೆಟ್ರೋಲ್ ಬಂಕ್ ಮಾಲೀಕ ದೀಪು (25) ಆತ್ಮಹತ್ಯೆಗೆ ಶರಣಾದ ಯುವಕ. ಪದೇ ಪದೆ ಬರುತ್ತಿದ್ದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆದರೂ ವಾಸಿಯಾ ಗದ್ದರಿಂದ ಅತಿಯಾಗಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾತ್ರೆಗಳನ್ನು ನುಂಗಿ ನರಳಾಡುತ್ತಿದ್ದ ದೀಪುನನ್ನು ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದ. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Translate »