ಕಾವೇರಿ ನದಿಗೆ ಹಾರಿ ಯುವಕ ಆತ್ಮಹತ್ಯೆ
ಕೊಡಗು

ಕಾವೇರಿ ನದಿಗೆ ಹಾರಿ ಯುವಕ ಆತ್ಮಹತ್ಯೆ

August 30, 2018

ಕುಶಾಲನಗರ:  ಇಲ್ಲಿನ ಟೋಲ್ ಗೇಟ್ ಬಳಿ ತುಂಬಿ ಹರಿಯುತ್ತಿ ರುವ ಕಾವೇರಿ ನದಿಗೆ ಹಾರಿ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕ ರಣ ಬುಧವಾರ ನಡೆದಿದೆ.

ಈತ ಸಮೀಪದ ಕೊಪ್ಪ ಗ್ರಾಮದ ನಿವಾಸಿ ಲೋಕೇಶ್ (27) ಎಂದು ತಿಳಿದು ಬಂದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆಸಿದರು. ಆದರೆ ಸಂಜೆವರೆಗೂ ಯುವಕನ ಮೃತದೇಹ ಪತ್ತೆಯಾಗಿಲ್ಲ. ಯುವಕ ನದಿಗೆ ಹಾರುವ ದೃಶ ಗೇಟ್ ಬಳಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Translate »