ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಕೊಡಗು

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

December 30, 2019

ಸೋಮವಾರಪೇಟೆ, ಡಿ.29- ವಿವಾಹಿತ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಮಸಗೋಡು ಗ್ರಾಮದಲ್ಲಿ ಭಾನು ವಾರ ನಡೆದಿದೆ. ಗ್ರಾಮದ ನಿವಾಸಿ ಜಯಮ್ಮ ಅವರ ಪುತ್ರ ನವೀನ್‍ಕುಮಾರ್(35) ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ರಾತ್ರಿ ಪಟ್ಟಣದಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿ, ರಾತ್ರಿ 1 ಗಂಟೆಗೆ ಮನೆಗೆ ತೆರಳಿದ ನವೀನ್ ಕುಮಾರ್, ತನ್ನ ತಾಯಿಯ ಸೀರೆಯಿಂದ ಮನೆಯ ಪಕ್ಕದಲ್ಲಿರುವ ಮರದ ಕೊಂಬೆಗೆ ನೇಣು ಬಿಗಿದುಕೊಂಡಿದ್ದಾನೆ.

ಬೆಳಿಗ್ಗೆ ಘಟನೆಗೆ ಬೆಳಕಿಗೆ ಬಂದಿದ್ದು, ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಮೇರೆ, ಪೊಲೀಸ್ ಠಾಣಾ ಧಿಕಾರಿ ಶಿವಶಂಕರ್ ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ತಾಯಿ, ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಇದ್ದಾರೆ.

Translate »