ಅಪ್ರಾಪ್ತೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕ ಜೈಲಿಗೆ
ಮೈಸೂರು

ಅಪ್ರಾಪ್ತೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕ ಜೈಲಿಗೆ

June 30, 2018

ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆತ್ನಿಸಿದ ಯುವಕನನ್ನು ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಗಾಯತ್ರಿಪುರಂ ನಿವಾಸಿ ಹೇಮಂತ ಕುಮಾರ್(20) ಬಂಧಿತ ಆರೋಪಿಯಾಗಿದ್ದು, ಇಂದು ಸಂಜೆ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು ಎಂದು ಇನ್ಸ್‍ಪೆಕ್ಟರ್ ಪಿ.ಪಿ.ಸಂತೋಷ್ ತಿಳಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಅಪ್ರಾಪ್ತೆ ಬಾಲಕಿ ಕಣ್ಮರೆಯಾಗಿದ್ದು, ಆ ಬಗ್ಗೆ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಹೇಮಂತ ಕುಮಾರ್ ಆಕೆಯನ್ನು ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆಂಬುದು ತಿಳಿದ ಕಾರಣ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

Translate »