ಯುವ ಬರಹಗಾರರ ಚೊಚ್ಚಲ ಕೃತಿ: ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಮೈಸೂರು

ಯುವ ಬರಹಗಾರರ ಚೊಚ್ಚಲ ಕೃತಿ: ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

June 12, 2018

ಮೈಸೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2017ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು 18 ರಿಂದ 35 ವರ್ಷದವರಾಗಿರಬೇಕು. ಸ್ವವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್‍ಎಸ್ ಎಲ್‍ಸಿ ಅಥವಾ ಅಧಿಕೃತ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸ ಬೇಕು. ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ, ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸು ವಂತಹ ವಿಷಯವಾಗಲಿ ಇರಬಾರದು.

ಅಲ್ಲದೇ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ ಅಥವಾ ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು ಅಥವಾ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹಸ್ತಪ್ರತಿಯ ಅಥವಾ ಡಿ.ಟಿ.ಪಿ ಪ್ರತಿಯ ಎರಡನೇ ಪ್ರತಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಜೂನ್ 30ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಬಹುದಾಗಿದೆ. ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು, ದೂರವಾಣ ಸಂಖ್ಯೆ : 080-22484516 ಅಥವಾ 22017704 ಅಥವಾ www.kannadapustaka padhikara.com ವೆಬ್‍ಸೈಟ್‍ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Translate »