ಯುವಕರ ಮೇಲೆ ಹಲ್ಲೆ: ನಾಲ್ವರ ಬಂಧನ
ಮೈಸೂರು

ಯುವಕರ ಮೇಲೆ ಹಲ್ಲೆ: ನಾಲ್ವರ ಬಂಧನ

June 14, 2018

ಮೈಸೂರು:  ಕ್ಷುಲ್ಲಕ ವಿಚಾರವಾಗಿ ಯುವಕನ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದ ನಾಲ್ಕು ಮಂದಿ ಯುವಕರನ್ನು ಕೆ.ಆರ್.ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಮೈಸೂರು ಹುಲ್ಲಿನಬೀದಿ ನಿವಾಸಿ ಗಣೇಶ್(25) ಹಲ್ಲೆಗೊಳಗಾದ ಯುವಕ. ಶೀನ, ಪ್ರಕಾಶ್, ದರ್ಶನ್, ಮನು ಹಲ್ಲೆ ಮಾಡಿದವರು. ಗಣೇಶ್, ಹುಲ್ಲಿನಬೀದಿಯ ಸಾರ್ವಜನಿಕ ಸ್ಥಳದಲ್ಲಿ ನಿಂತು ಮೊಬೈಲ್‍ನಲ್ಲಿ ತನ್ನ ಗೆಳೆಯರೊಂದಿಗೆ ಮಾತನಾಡುತ್ತಿದ್ದಾಗ ಸಮೀಪದಲ್ಲಿದ್ದ ಶ್ರೀನ ಇತರರು ಗಣೇಶ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.

ಈ ಘಟನೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಗಣೇಶ್‍ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು ಘಟನೆ ಬಗ್ಗೆ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ವಿಷಯ ತಿಳಿದು ಕೆ.ಆರ್.ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲಿಸಿದ ನಂತರ ಹಲ್ಲೆ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 307 ಕಲಂ ಪ್ರಕಾರ ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Translate »