ಮಕ್ಕಳ ಸಾಹಿತ್ಯ ಪರಿಷತ್ ತಾಲೂಕು   ಅಧ್ಯಕ್ಷರಾಗಿ ಜಮೀರ್ ಅಹಮದ್
ಹಾಸನ

ಮಕ್ಕಳ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾಗಿ ಜಮೀರ್ ಅಹಮದ್

January 3, 2019

ರಾಮನಾಥಪುರ: ಅರಕಲಗೂಡು ತಾಲೂಕು ಘಟಕದ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಂಗಳೂರು ವಿಶ್ವವಿದ್ಯಾನಿಲಯ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ, ಇಲ್ಲಿನ ಕನ್ನಡ ವಿಭಾಗದ ಅತಿಥಿ ಉಪನ್ಯಾಸಕ ಜûಮೀರ್ ಅಹಮದ್ ಆಯ್ಕೆಯಾಗಿದ್ದಾರೆ.

ಇವರು ಕನ್ನಡ ಅತಿಥಿ ಉಪನ್ಯಾಸಕನ ವೃತ್ತಿಯ ಜೊತೆಗೆ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾಗಿ, ಕಾವೇರಿ ಸ್ವಚ್ಛತಾ ಆಂದೋಲನದ ಕೊಣನೂರು ಹೋಬಳಿ ಘಟಕದ ಸಂಚಾಲಕ ರಾಗಿ, ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಎಂಎ ಸ್ನಾತ ಕೋತ್ತರ ಪದವಿ ಪಡೆದಿರುತ್ತಾರೆ. ಪ್ರಸ್ತುತ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಡಿ.ನಾಗಣ್ಣ ಮಾರ್ಗದರ್ಶನದಲ್ಲಿ ‘ಮೈಸೂರು ನಗರದ ಮುಸ್ಲಿಮರು: ಸಾಂಸ್ಕøತಿಕ ಅಧ್ಯಯನ’ ವಿಷಯದ ಅಡಿಯಲ್ಲಿ ಪಿಹೆಚ್‍ಡಿ ಮಾಡುತ್ತಿದ್ದು ಇವರ ಸೇವೆಯನ್ನು ಮನಗಂಡು ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ರಾಷ್ಟ್ರೀಯ ಪರಿಸರ ಪ್ರಶಸ್ತಿ ಪುರಸ್ಕøತ ಸಿ.ಎನ್. ಅಶೋಕ್ ಅರಕಲಗೂಡು ತಾಲೂಕು ಘಟಕದ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ಜûಮೀರ್ ಅಹಮದ್ ಮಾತನಾಡಿ, ತಾಲೂಕಿನ ಮಕ್ಕಳಲ್ಲಿ ಸಾಹಿತ್ಯಾಭಿರುಚಿ, ಸೃಜನಶೀಲ ಬೆಳವಣಿಗೆ, ಪರಿಸರ ಸಂರಕ್ಷಣೆ, ಸಹಬಾಳ್ವೆ, ದೇಶಪ್ರೇಮ ಹಾಗೂ ವಿಶ್ವಮಾನವ ಸಂದೇಶವನ್ನು ಬೆಳೆಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ ದೊಂದಿಗೆ ಹಲವಾರು ಕ್ರಿಯಾಶೀಲ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ಅಭಿನಂದನೆ: ಅರಕಲಗೂಡು ತಾಲೂಕು ಘಟಕದ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕೊಣನೂರು ಕನ್ನಡ ವಿಭಾಗದ ಅತಿಥಿ ಉಪನ್ಯಾಸಕ ಜûಮೀರ್ ಅಹಮದ್ ಆಯ್ಕೆಯಾಗಿರುವುದಕ್ಕೆ ಅರಕಲಗೂಡು ತಾಲೂಕು ಶರಣ ಸಾಹಿತ್ಯ ಪರಿಷತ್ ಗೌರವಧ್ಯಕ್ಷ ಟಿ.ಮಲ್ಲೇಶ್, ಅಧ್ಯಕ್ಷ ಕುಮಾರಸ್ವಾಮಿ ಮುಂತಾದವರು ಅಭಿನಂದಿಸಿದ್ದಾರೆ.

Translate »